ಕಾಂಗ್ರೆಸ್ ಮಿತ್ರಕೂಟ ಅಧಿಕಾರಕ್ಕೆ ಬಂದರೆ ‘MSP ಗ್ಯಾರಂಟಿ’: ರಾಹುಲ್ ಗಾಂಧಿ ಘೋಷಣೆ
ನವದೆಹಲಿ, ಫೆ.13 – ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬೆಳೆ ಬೆಂಬಲ ಬೆಲೆಗೆ ಆಗ್ರಹಿಸಿ ಮತ್ತೆ ರೈತರು ಬೃಹತ್ ಪ್ರತಿಭಟನೆಗೆ ಮುಂದಾಗಿರುವಂತೆಯೇ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನೇತೃತ್ವದ INDI ಮಿತ್ರಕೂಟ ಅಧಿಕಾರಕ್ಕೆ ಬಂದರೆ ರೈತರಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ ವೇಳೆ ದೆಹಲಿಯಲ್ಲಿನ ರೈತರ ಪ್ರತಿಭಟನೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election) ವಿರೋಧ ಪಕ್ಷದ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಖಾತ್ರಿಪಡಿಸುವ ಕಾನೂನನ್ನು I.N.D.I.A ಬ್ಲಾಕ್ ತರಲಿದೆ ಎಂದು ಹೇಳಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ದೇಶಾದ್ಯಂತ ರೈತರ ಬಹುಕಾಲದ ಬೇಡಿಕೆಯಾಗಿದೆ. ವಿವಿಧ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿಯನ್ನು ರಕ್ಷಿಸುವ ಕಾನೂನನ್ನು ಜಾರಿಗೊಳಿಸುವ ಭರವಸೆಯು ಕಾಂಗ್ರೆಸ್ ನಾಯಕತ್ವದಿಂದ ನಿರ್ಣಾಯಕ ಭರವಸೆಯಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಐತಿಹಾಸಿಕ ಪ್ರತಿಜ್ಞೆ ತೆಗೆದುಕೊಂಡಿದ್ದು, ಸ್ವಾಮಿನಾಥನ್ ಸಮಿತಿ ವರದಿ ಪ್ರಕಾರ ಎಂಎಸ್‌ಪಿ ಕಾನೂನು ರೂಪಿಸುವ ಮೂಲಕ ರೈತರಿಗೆ ನ್ಯಾಯಯುತ ಬೆಲೆಯನ್ನು ಖಾತರಿಪಡಿಸುತ್ತೇವೆ. ಇದರಿಂದ 15 ಕೋಟಿ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
कांग्रेस की गारंटी 📢
किसानों को स्वामीनाथन कमीशन के अनुसार MSP की गारंटी देंगे।
: @RahulGandhi जी
📍 छत्तीसगढ़ pic.twitter.com/6J9jImKSIi
— Congress (@INCIndia) February 13, 2024
ಅಂತೆಯೇ ಇಂದು “ರೈತ ಸಹೋದರರಿಗೆ ಐತಿಹಾಸಿಕ ದಿನ” ಎಂದು ಹೇಳಿದರು. ಸ್ವಾಮಿನಾಥನ್ ಆಯೋಗದ ಪ್ರಕಾರ ಬೆಳೆಗಳ ಮೇಲೆ ಪ್ರತಿ ರೈತರಿಗೆ ಎಂಎಸ್‌ಪಿ ಕಾನೂನುಬದ್ಧ ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮವು 15 ಕೋಟಿ ರೈತ ಕುಟುಂಬಗಳ ಏಳಿಗೆಯನ್ನು ಖಾತ್ರಿಪಡಿಸುವ ಮೂಲಕ ಅವರ ಜೀವನವನ್ನು ಬದಲಾಯಿಸುತ್ತದೆ ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನ್ಯಾಯ್ (ನ್ಯಾಯ) ಹಾದಿಯಲ್ಲಿ ಇದು ಕಾಂಗ್ರೆಸ್‌ನ ಮೊದಲ ಖಾತರಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಕಡ್ಡಾಯ- ಸಿಎಂ ಸಿದ್ಧರಾಮಯ್ಯ ಆದೇಶ.
ಬೆಂಗಳೂರು , ಫೆ. 13 – ಇನ್ಮುಂದೆ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರದಲ್ಲಿ ಕಡ್ಡಾಯವಾಗಿ ʻವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕʼ ಎಂದು ಬರೆಸಿ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸಲು ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು ಹೇಳಿದರು.
ನಾನೇನು ಕುರುಬ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿದ್ದೆನಾ? ನಾನು ಹುಟ್ಟಿದ್ದೇನೆ, ಜಾತಿ ವ್ಯವಸ್ಥೆ ಇದೆ. ಕರ್ಮ ಅನ್ನೋದು ಪಟ್ಟಭದ್ರ ಹಿತಾಸಕ್ತಿಗಳು ಮಾಡಿದ್ದು. ಬಸವಣ್ಣನವರ ಕಾರ್ಯಕ್ರಮಕ್ಕೆ ಸರ್ಕಾರದಲ್ಲಿ ದುಡ್ಡು ಇಲ್ಲ ಎಂದು ಹೇಳುವುದೇ ಇಲ್ಲ ಎಂದರು.
ನಾಲ್ಕು ಮಂದಿಯನ್ನು ಭಾರತ ಮರೆಯಲು ಸಾಧ್ಯವಿಲ್ಲ: ಬುದ್ಧ, ಬಸವ, ಅಂಬೇಡ್ಕರ್, ಗಾಂಧಿಯವರನ್ನು ಭಾರತ ದೇಶ ಮರೆಯಲು ಸಾಧ್ಯವೇ ಇಲ್ಲ. ಇವರೆಲ್ಲ ಸಮಾಜದಲ್ಲಿರುವ ಅಂಕು ಡೊಂಕು ತಿದ್ದಿದವರು. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು ಎಂದು ಆಶಿಸಿದರು.
ಬಸವಣ್ಣನವರ ಅನುಭವ ಮಂಟಪ ಮಾದರಿ: ಸಂಸದೀಯ ವ್ಯವಸ್ಥೆ ನಮ್ಮಿಂದ ಬಂತು ಎಂದು ಬ್ರಿಟಿಷರು ಹೇಳುತ್ತಾರೆ. ಆದರೆ ಅದು ನಮ್ಮ ಬಸವಣ್ಣನವರ ಕಾಲದಲ್ಲೇ ಬಂದಿದೆ. ಅನುಭವ ಮಂಟಪದ ಮೂಲಕ ಸಂಸದೀಯ ವ್ಯವಸ್ಥೆ ತಂದಿದ್ದಾರೆ. ನಾವೀಗ ಸಂಸತ್ತು ಅಂತ ಯಾವುದನ್ನು ಹೇಳುತ್ತೇವೆಯೋ, ಆಗಲೇ ಜನರ ಧ್ವನಿ ಎತ್ತಲು ಬಸವಣ್ಣ ಅನುಭವ ಮಂಟಪವನ್ನು ಮಾಡಿದ್ದರು. ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಮನುವಾದಿಗಳು ಕೆಲವು ಕೆಟ್ಟ ಸಂಪ್ರದಾಯಗಳನ್ನ ಮಾಡಿಬಿಟ್ಟಿದ್ದರು. ಇದರಿಂದ ಅಸಮಾನತೆ ಹುಟ್ಟು ಹಾಕಿದ್ದರು. 850 ವರ್ಷಗಳ ಹಿಂದೆಯೇ ಬಸವಣ್ಣವರು ಕಂದಾಚಾರವನ್ನು ಹೊಗಲಾಡಿಸಲು ಶ್ರಮಿಸಿದ್ದರು ಎಂದರು
ರೈತರೊಂದಿಗಿನ ಕೇಂದ್ರ ಸಚಿವರ ಸಭೆ ವಿಫಲ: ಸ್ಪಷ್ಟ ನಿರ್ಧಾರ ತಿಳಿಸದ ಕೇಂದ್ರದ ವಿರುದ್ದ ಆಕ್ರೋಶ
ನವದೆಹಲಿ,ಫೆ. 13 – ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ದ ದೆಹಲಿ ಚಲೋ ನಡೆಸುತ್ತಿರುವ ರೈತ ಮುಖಂಡರ ಜೊತೆ ಕೇಂದ್ರ ಸಚಿವರಾದ ಪಿಯುಷ್ ಗೋಯಲ್, ಕೃಷಿ ಸಚಿವ ಅರ್ಜುನ್ ಮುಂಡ ನಡೆಸಿದ ಸಭೆ ವಿಫಲವಾಗಿದ್ದು ರೈತ ಮುಖಂಡರು ಪ್ರತಿಭಟನೆ ಮುಂದುವರೆಸಿದ್ದಾರೆ. ಸ್ಪಷ್ಟ ನಿರ್ಧಾರ ತಿಳಿಸದ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ ಕೇಂದ್ರ ಸರ್ಕಾರ ರೈತರಿಗೆ ನೀಡಿದ ಭರವಸೆ ಹುಸಿಗೊಳಿಸಿದ ವಿರುದ್ಧ ರೈತರ ದೆಹಲಿ ಚಲೋ ಟ್ಯಾಕ್ಟರ್ ರ್ಯಾಲಿ, ನಡೆಸಲಾಗುತ್ತಿದ್ದಾರೆ. ಈ ನಡುವೆ ಕೇಂದ್ರ ಸಚಿವ ಪಿಯುಷ್ ಗೋಯಲ್, ಕೃಷಿ ಸಚಿವ ಅರ್ಜುನ್ ಮುಂಡ ಅವರು ರೈತಮುಖಂಡರ ಜೊತೆ ಪಂಜಾಬ್ ನ ಚಂಡಿಗಢದಲ್ಲಿ ನಿನ್ನೆ ಸಂಜೆ 6 ಗಂಟೆಯಿಂದ 11:00 ತನಕ ಸಭೆ ನಡೆಸಿದರು. ಆದರೆ ಸಭೆ ಯಾವುದೇ ಸಫಲತೆ ಕಾಣಲಿಲ್ಲ. ಹಿಂದಿನ ವರ್ಷ ದೆಹಲಿ ಹೋರಾಟದಲ್ಲಿ ಮಡಿದ ರೈತರ ಕುಟುಂಬಗಳಿಗೆ 10 ಲಕ್ಷ ರೂ ಪರಿಹಾರ ನೀಡಿದ್ದೇವೆ. ಈ ಹೋರಾಟದಲ್ಲಿ ದಾಖಲಾಗಿದ್ದ 3365 ಪೊಲೀಸ್ ಮೊಕದ್ದಮೆ ವಾಪಸ್ ಪಡೆದಿದ್ದೇವೆ ಎಂದು ಸಚಿವ ಪಿಯೂಷ್ ಗೂಯಲ್ ರೈತರ ಪ್ರಶ್ನೆಗಳಿಗೆ ಉತ್ತರಿಸಿದರು.
ಸಭೆ ಆರಂಭದಲ್ಲಿಯೇ ರೈತ ಮುಖಂಡ ಜಗಜಿತ್ ಸಿಂಗ್ ದಲೆವಾಲಾ, ಕರ್ನಾಟಕದಿಂದ ಬರುತ್ತಿರುವ ರೈತರನ್ನ ಅಮಾನುಷವಾಗಿ ರೌಡಿಗಳ ರೀತಿಯಲ್ಲಿ ಬಂಧಿಸಿರುವ ಪೊಲೀಸರ ಕ್ರಮ ಹಾಗೂ ರೈತ ಮುಖಂಡ ಕುರುಬೂರು ಶಾಂತಕುಮಾರ್ ಪತ್ನಿಗೆ ತಲೆಗೆ ಪೆಟ್ಟು ಬೀಳಲು ಪೊಲೀಸರಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ನಿಮ್ಮ ಸರ್ಕಾರದ ನಡವಳಿಕೆ ಸರಿಯಲ್ಲ. ತಾವು ಉತ್ತರಿಸಬೇಕು ಎಂದರು. ಆ ವೇಳೆ ಸಚಿವ ಪಿಯೂಷ್ ಗೋಯಲ್ ಮುಂಜಾಗ್ರತಾ ಕ್ರಮವಾಗಿ ರೈತರನ್ನು ವಶಕ್ಕೆ ಪಡೆದಿದ್ದೇವೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ತಿಳಿಸಿದರು.
ಸುದೀರ್ಘ 5 ಗಂಟೆಗಳ ಚರ್ಚೆ ನಡೆದರೂ ಸರ್ಕಾರ ಸ್ಪಷ್ಟವಾದ ನಿರ್ಧಾರವನ್ನು ತಿಳಿಸಲಿಲ್ಲ. ನಾವು ಮೂರು ತಿಂಗಳಿಂದಲೇ ಚಳುವಳಿ ಬಗ್ಗೆ ಘೋಷಣೆ ಮಾಡಿದ್ದೇವೆ. ಸರ್ಕಾರ ಅಂತಿಮ ಕ್ಷಣದಲ್ಲಿ ಸಭೆ ಕರೆದಿದ್ದೀರಿ ಆದರೆ ಯಾವುದೇ ನಿರ್ಧಾರ ಹೇಳುತ್ತಿಲ್ಲ. ಆದ್ದರಿಂದ ನಾವು ಚಳುವಳಿಯನ್ನು ನಿಲ್ಲಿಸುವುದಿಲ್ಲ. ಫೆ. 13 ರಿಂದ ಡೆಲ್ಲಿ ಟ್ರ್ಯಾಕ್ಟರ್ ರ್ಯಾಲಿ ಮಾಡುತ್ತೇವೆ. ಶಾಂತಿಯುತವಾಗಿ ರ್ಯಾಲಿ ಮಾಡುತ್ತೇವೆ. ನೀವು ನಮ್ಮನ್ನು ಬಂಧಿಸುವುದಾದರೆ ನಾವು ಹೆದರುವುದಿಲ್ಲ ಎಂದು ಘೋಷಣೆ ಮಾಡಿ ಸಭೆಯಿಂದ ಹೊರಗೆ ಬರಲಾಯಿತು.
ದೇಶದ ಎಲ್ಲ ರಾಜ್ಯಗಳ 200ಕ್ಕೂ ಹೆಚ್ಚು ರೈತ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ದೆಹಲಿಯಲ್ಲಿ ಚಳುವಳಿ ನಡೆಸಲಾಗುತ್ತಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಯಾಗಬೇಕು. ಡಾ. ಸ್ವಾಮಿನಾಥನ್ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ಕಬ್ಬು ಬೆಳೆಗೆ ಎಫ್ ಆರ್ ಪಿ ದರ, ಡಾ. ಸ್ವಾಮಿನಾಥನ್ ವರದಿಯಂತೆ ಉತ್ಪಾದನಾ ವೆಚ್ಚದ ಅರ್ಧದಷ್ಟು ಹೆಚ್ಚುವರಿ ಸೇರಿಸಿ ಬೆಲೆ ನಿಗದಿ ಆಗಬೇಕು.
ದೇಶದ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಆಗಬೇಕು . ವಿಶ್ವ ವ್ಯಾಪಾರ ಒಪ್ಪಂದದಿಂದ ಭಾರತ ಸರ್ಕಾರ ಹೊರಬರಬೇಕು. ದೇಶಾದ್ಯಂತ 60 ವರ್ಷ ತುಂಬಿದ ರೈತರಿಗೆ ಕನಿಷ್ಠ 10 ಸಾವಿರ ಪಿಂಚಣಿ ಯೋಜನೆ ಜಾರಿಗೆ ತರಬೇಕು . ಪ್ರಧಾನಿ ಫಸಲ್ ಭೀಮಾ ಯೋಜನೆ ಎಲ್ಲಾ ಬೆಳೆಗಳಿಗೂ ಅನ್ವಯಾಗಬೇಕು. ಪ್ರತಿ ರೈತರ ಹೊಲದ ಬೆಳೆ ನಷ್ಟ ಪರಿಹಾರ ನೀಡುವಂತಾಗಬೇಕು. ಕೃಷಿ ಕಾರ್ಮಿಕರಿಗೆ ಎನ್ ಆರ್ ಇಜಿ ದಿನ ಭತ್ಯೆ ಕನಿಷ್ಠ 700 ರೂ. ನಿಗದಿ ಆಗಬೇಕು. ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನಿಲ್ಲಿಸಲು ವಿದ್ಯುತ್ ಖಾಸಗಿಕರಣ ನೀತಿ ಕೈ ಬಿಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಎಲ್ಲ ರಾಜ್ಯಗಳಿಂದ ಲಕ್ಷಾಂತರ ರೈತರು ರ್ಯಾಲಿ ಮೂಲಕ ದೆಹಲಿ ಚಲೋ ಆಂದೋಲನ ನಡೆಸುತ್ತಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯ ರೈತ ಮುಖಂಡರುಗಳಾದ ಜಗಜಿತ್ ಸಿಂಗ್ ದಲೆವಾಲ, ಶಿವಕುಮಾರ್ ಕಕ್ಕ, ಅಭಿವಮನ್ನು ಕೂಹರ, ಕುರುಬೂರು ಶಾಂತಕುಮಾರ್, ಹರಪಾಲ ಬಿಲಾರಿ, ಕೆ. ವಿ ಬಿಜು, ಪಾಂಡ್ಯ, , ಸುಖಂದರ್ ಕೌರ, ಜರ್ನಲ್ ಸಿಂಗ್, ಕೇಂದ್ರ ಸರ್ಕಾರದ ಕೃಷಿ ಇಲಾಖೆ ಕಾರ್ಯದರ್ಶಿ, ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಬೂಪಾಲ್ ನಲ್ಲಿ ರೈತರ ಬಂಧನ ಖಂಡಿಸಿ ಮೈಸೂರಿನಲ್ಲಿ ರಸ್ತೆ ತಡೆದು ರೈತ ಸಂಘಟನೆಗಳ ಪ್ರತಿಭಟನೆ
ಮೈಸೂರು, ಫೆ. 12 – ನಾಳೆ ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಹಮ್ಮಿಕೊಂಡಿರುವ ಪ್ರತಿಣಟನೆಯಲ್ಲಿ ಭಾವಹಿಸಲು ನಗರದಿಂದ ತೆರಳುತ್ತಿದ್ದ ರೈತರು ಹಾಗೂ ರೈತ ಮಹಿಳೆಯರನ್ನು ಬೂಪಾಲ್ ರೈಲ್ವೆ ನಿಲ್ದಾಣದಲ್ಲಿ ತಡೆದು ಬಂಧಿಸಿರುವುದನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸಿದರು.
ನಗರದ ಗನ್ ಹೌಸ್ ವೃತ್ತದ ಬಳಿ ಸೋಮವಾರ ಬೆಳಿಗ್ಗೆ ಸಮಾವೇಶಗೊಂಡ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಧಿಕ್ಕಾರ ಕೂಗಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಳ್ಳಿ ದೇವರಾಜ್ ನೇತೃತ್ವಸಲ್ಲಿ ನಡೆದ ಪಗತಿಭಟನೆಯಲ್ಲಿ ಅವರು ಮಾತನಾಡುತ್ತಾ, ನಾಳೆ ಮಂಗಳವಾರ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ, ಕೃಷಿ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಹಾಗೂ ರೈತರ ಇನಿತರ ಸಮಸೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ದೇಶದ ಎಲ್ಲಾ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಈ ಪ್ರತಿಭಟನೆಯಲ್ಲಿ ಮೈಸೂರುನಗರದ ೫೬ ಮಂದಿ ರೈತರು ಹಾಗೂ ರೈತ ಮಹಿಳೆಯರು ಸೇರಿದಂತೆ ರಾಜ್ಯದಿಂದ ಹೊರಟಿದ್ದ ನೂರಾರು ರೈತ ಕುಟುಂಬಗಳನ್ನು ಭಾನುವಾರ ಮದ್ಯ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಬೂಪಾಲ್ ರೈಲ್ವೆ ನಿಲ್ದಾಣದಲ್ಲಿ ರೈಲು,ತಡೆದು ಬಂಧನ ಮಾಡಿರುವುದನ್ನು ಖಂಡಿಸಿ ರಸ್ತೆ ತಡೆ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಕೇಂದ್ರ ಸರ್ಕಾರದ ಈ ರೈತ ವಿರೋಧಿ ನಡೆಯನ್ನು ಖಂಡಿಸಿದ ರೈತ ಸಂಘಟನೆಗಳು ಧಿಕ್ಕಾರ ಕೂಗಿದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಯ ರೈತ ಮುಖಂಡರು ಭಾಗವಹಿಸಿದ್ದರು.
ಲೋಕಸಭೆ ಚುನಾವಣೆ: ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್ ಬೆಂಗಳೂರು ಕ್ಷೇತ್ರಗಳು: ತೇಜಸ್ವಿ ಸೂರ್ಯ ಗತಿಯೇನು?
ರಾಜ್ಯಸಭೆ ಸದಸ್ಯರಾಗಿದ್ದ ರಾಜೀವ್ ಚಂದ್ರಶೇಖರ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಬಾರಿ ಟಿಕೆಟ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅದೇ ರೀತಿಯಲ್ಲಿ, ಐಟಿ ಸಚಿವ ಅಶ್ವಿನಿ ವೈಷ್ಣವ್, ಮತ್ತು ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ.
ನವದೆಹಲಿ, ಫೆ.12 – ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಬಿಜೆಪಿ ರಾಜ್ಯಸಭೆ ಚುನಾವಣೆಗೆ ತನ್ನ 14 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಸಂಜೆ ಘೋಷಣೆ ಮಾಡಿದೆ. ನಾರಾಯಣಸಾ ಕೃಷ್ಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ಬಾಗಲಕೋಟೆ ಮೂಲದವರಾಗಿದ್ದು, ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕರ್ನಾಟಕದ ಎಸ್‌ಎಸ್‌ಕೆ ಸಮಾಜದ ಮುಖಂಡರಾಗಿದ್ದಾರೆ.
ಕರ್ನಾಟಕದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್‌ನ ಎಲ್. ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್ ಅವರು ಏಪ್ರಿಲ್ 2ರಂದು ನಿವೃತ್ತರಾಗಲಿದ್ದಾರೆ. ಈ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಯ 224 ಶಾಸಕರು ಮತದಾರರಾಗಿದ್ದು, ವಿಧಾನಸಭೆಯ ಬಲಾಬಲದ ಆಧಾರದಲ್ಲಿ ಕಾಂಗ್ರೆಸ್ ಮೂರು ಹಾಗೂ ಬಿಜೆಪಿ ಒಂದು ಸ್ಥಾನ ಗೆಲ್ಲಬಹುದು.
ಮೋದಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಿರ್ಮಲಾ ಮತ್ತು ರಾಜೀವ್ ಚಂದ್ರಶೇಖರ್ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ಖಚಿತ ಎಂದು ಹೇಳಲಾಗುತ್ತಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ನಿರ್ಮಲಾ ಸೀತರಾಮನ್, ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದಿಂದ ರಾಜೀವ್ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹಾಲಿ ಸಂಸದ ತೇಜಸ್ವಿ ಸೂರ್ಯ ತಮ್ಮ ಕ್ಷೇತ್ರ ಬಿಟ್ಟು ಬೇರೆಡೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ವಿದ್ಯಾವಂತ ಮತದಾರರಿದ್ದಾರೆ. ಈ ಭಾಗದಲ್ಲಿ ಈ ಇಬ್ಬರು ಜನಪ್ರಿಯ ನಾಯಕರಾಗಿದ್ದಾರೆ, ಹಾಗಾಗಿ ಈ ಕ್ಷೇತ್ರಗಳಿಂದಲೇ ಇಬ್ಬರನ್ನು ಕಣಕ್ಕಿಳಿಸಬೇಕೆಂದು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ, ಒಂದು ವೇಳೆ ನಿರ್ಮಲಾ ಸೀತಾರಾಮನ್ ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಿದರೇ ತೇಜಸ್ವಿ ಸೂರ್ಯಾ ಬೇರೆ ಕ್ಷೇತ್ರದಿಂದ ತಮ್ಮ ಅದೃಷ್ಟ ಪರೀಕ್ಷಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ತೆರಿಗೆ ಸಂಗ್ರಹಿಸಿ ಕೊಡುವಲ್ಲಿ ಕರ್ನಾಟಕ ರಾಜ್ಯಕ್ಕೆ 2ನೇ ಸ್ಥಾನ: ತೆರಿಗೆ ಪಾಲು ಪಡೆಯುವಲ್ಲಿ10ನೇ ಸ್ಥಾನ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು,ಫೆ. 12 – ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆ ಪಾಲು ಪಡೆಯುವಲ್ಲಿ 10ನೇ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲು ಸಿಗುತ್ತಿಲ್ಲ. ನ್ಯಾಯಯುತ ಪಾಲು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
ರಾಜ್ಯದ 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅವುಗಳಲ್ಲಿ 196 ತಡಲೂಕುಗಳನ್ನ ತೀವ್ರ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕಾರ್ಯಕ್ರಮಗಳನ್ನು ಕೈಗೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಗೆಹ್ಲೋಟ್ ಮಾಹಿತಿ ನೀಡಿದರು.
ಕೇಂದ್ರಕ್ಕೆ ಬರಪರಿಹಾರ ಕೇಳಿದ್ದು ಇನ್ನೂ ಪರಿಹಾರ ಬಿಡುಗಡೆಯಾಗಿಲ್ಲ 18,171 ಕೋಟಿ ರೂ ನೆರವು ಕೇಳಲಾಗಿದೆ. ಈವರೆಗೂ ಕೇಂದ್ರದಿಂದ ಪರಿಹಾರ ಬಂದಿಲ್ಲ ಎಂದರು.
ದೆಹಲಿಗೆ ತೆರಳುತ್ತಿದ್ದ ರೈತರನ್ನು ಬಂಧಿಸಿದ ಮಧ್ಯಪ್ರದೇಶ ಸರ್ಕಾರದ ಕ್ರಮ ಖಂಡನೀಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಫೆ. 12 – ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಲು ಅವಕಾಶ ನೀಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಮ್ಮ ರೈತರನ್ನು ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎನ್ನುವುದು ಸ್ಪಷ್ಟ.
ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ, ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು.
ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಅವರ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದಕ್ಕೂ ಮುನ್ನ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ದಕ್ಷಿಣ ಭಾರತ ಸಂಚಾಲಕ ಶಾಂತಕುಮಾರ್ ಅವರು, ರೈಲಿನಲ್ಲಿ ರೈತರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ “ಪೋಲಿಸ್ ನಮ್ಮನ್ನು ಭೋಪಾಲ್ ನಿಲ್ದಾಣದಲ್ಲಿ ತಡೆದರು ಮತ್ತು ಈ ವೇಳೆ ನಮ್ಮ ಕೆಲವು ಸದಸ್ಯರು ಗಾಯಗೊಂಡಿದ್ದಾರೆ” ಎಂದರು. ಅಲ್ಲದೆ ತಾವು ಹೇಗಾದರೂ ತಪ್ಪಿಸಿಕೊಂಡು ರಾಷ್ಟ್ರ ರಾಜಧಾನಿ ತಲುಪಿರುವುದಾಗಿ ಹೇಳಿದ್ದರು.
ಬಿಜೆಪಿ-ಜೆಡಿಎಸ್ ಮೈತ್ರಿ ಅಪಸ್ವರ: ಬಿಜೆಪಿ ನಾಯಕರಿಗೆ ಅಮಿತ್ ಶಾ ಖಡಕ್ ಎಚ್ಚರಿಕೆ
ಮೈಸೂರು, ಫೆ.೧೧ – ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಜತೆ ಮಾಡಿಕೊಂಡಿರುವ ಮೈತ್ರಿ ಬಗ್ಗೆ ಅಪಸ್ವರ ಎತ್ತಿದ ಬಿಜೆಪಿ ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಎಚ್ಚರಿಕೆ ನೀಡಿದರು.
ಮೈಸೂರಿನ ರ್‍ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಯಾರೂ ಅಪಸ್ವರ ಎತ್ತಬಾರದು. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸಂದರ್ಭ ಇಂತಹ ಅಪಸ್ವರದ ಮಾತುಗಳು ಬಂದಿದ್ದರಿಂದಲೇ ಅವರಿಗೆ ಸೋಲಾಗಿತ್ತು. ಅದೇ ಕೆಲಸವನ್ನು ನೀವು ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿಯನ್ನು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಫೆಬ್ರವರಿ 20, 21ರಂದು ಎರಡು ದಿನಗಳ ಕಾಲ ಸಭೆ ನಡೆಸಲು ಅಮಿತ್ ಶಾ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಅವರ ನೇತೃತ್ವದಲ್ಲಿ ಸಭೆಗಳು ನಡೆಯಲಿದ್ದು ಅಂದಿನ ಸಭೆಗಳಲ್ಲಿ ಎಲ್ಲ ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚೆಯಾಗಲಿದೆ.
ಮೈಸೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಡಿವಿ ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವರಾದ ಶ್ರೀರಾಮುಲು, ರಾಮದಾಸ್ ಸೇರಿದಂತೆ ಹಲವರು ಭಾಗಿಯಾದರು. ಆರ್‌ಎಸ್‌ಎಸ್ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಸಹ ಉಪಸ್ಥಿತರಿದ್ದರು.