ಸ್ಯಾಂಟ್ರೋ ರವಿ ಪ್ರಕರಣಳ ತನಿಖೆ ಸಿಐಡಿಗೆ: ಗೃಹ ಸಚಿವ ಆರಗ ಜ್ಞಾನೇಂದ್ರ

0
28
ಬೆಂಗಳೂರು,ಜ.16 – ಕರ್ನಾಟಕ ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರ, ವಂಚನೆಗಳನ್ನು ನಡೆಸಿ, ಘಟಾನುಘಟಿ ಶಿಫಾರ ಹೊಂದಿರುವ ಸ್ಯಾಂಟ್ರೋ ರವಿ ವಿರುದ್ಧದ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸೋಮವಾರ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ‘ವಂಚಕ ಎನ್ನಲಾದ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ತನಿಖೆಗೆ ರಾಜ್ಯ ಸರ್ಕಾರ ಸಿಐಡಿಗೆ ಆದೇಶಿಸಿದೆ ಎಂದು ಹೇಳಿದ್ದಾರೆ.
ಮೈಸೂರಿನ ವಿಜಯನಗರ ಠಾಣೆಯಲ್ಲಿ ದಾಖಲಾಗಿದ್ದ ಮೂರು ಪ್ರಕರಣ, ಕಾಟನ್ ಪೇಟೆ ಠಾಣೆಯಲ್ಲಿ ದಾಖಲಾಗಿದ್ದ ಫೇಕ್ ಕೇಸ್, ರವಿ ಪತ್ನಿ ದಾಖಲಿಸಿದ್ದ ಪ್ರಕರಣ, ವರ್ಗಾವಣೆ ಮತ್ತು ವೇಶ್ಯಾವಾಟಿಕೆ ದಂಧೆ ಪ್ರಕರಣಳೂ ಸೇರಿದಂತೆ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದರು.
ಸಿಐಡಿಗೆ ವಹಿಸಲು ಸರ್ಕಾರಿ ವಕೀಲರ ಮನವಿ:
ಇನ್ನು ಇದಕ್ಕೂ ಮೊದಲು ಮೈಸೂರು 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಕೋರ್ಟ್‌ನಲ್ಲಿ ಸರ್ಕಾರಿ ವಕೀಲರು ಪ್ರಕರಣವನ್ನು ಸಿಐಡಿಗೆ ವಹಿಸಲು ಮನವಿ ಮಾಡಿದರು. ಆಗ ಕೋರ್ಟ್ ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ಸಿಐಡಿಗೆ ವಹಿಸುವುದು ಸರ್ಕಾರದ ಕೆಲಸ, ಸೂಕ್ತ ದಾಖಲಾತಿಗಳ ಜೊತೆ ಅರ್ಜಿ ಸಲ್ಲಿಕೆ ಮಾಡಿ ಎಂದು ಸೂಚನೆ ನೀಡಿತು.
ಈ ಬೆಳವಣಿಗೆ ಬೆನ್ನಲ್ಲೇ ಕರ್ನಾಟಕ ಗೃಹ ಸಚಿನವಾಲಯ ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.
ಜನವರಿ 25ರವರೆಗೆ ನ್ಯಾಯಾಂಗ ಬಂಧನ
ಗುಜರಾತ್‌ನಲ್ಲಿ ಬಂಧಿಸಲಾದ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಶನಿವಾರ ರಾತ್ರಿ ನ್ಯಾಯಾಧೀಶರ ನಿವಾಸಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಆಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದರು. ಸೋಮವಾರ ಕೋರ್ಟ್‌ಗೆ ಪುನಃ ಎಲ್ಲಾ ಆರೋಪಿಗಳನ್ನು ಹಾಜರುಪಡಿಸಲಾಯಿತು. ಆದರೆ ಪೊಲೀಸರ ವಶಕ್ಕೆ ನೀಡಿದ ಕೋರ್ಟ್ ಜನವರಿ 25ರ ತನಕ ನ್ಯಾಯಾಂಗ ಬಂಧನಕ್ಕೆ ನೀಡಿತು.
Advertisements

LEAVE A REPLY

Please enter your comment!
Please enter your name here