‘ಕೈ’ ನಾಯಕರ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದೂರು ಅಲ್ಲಿಸಿದ ಬಿಜೆಪಿ ಮುಖಂಡ ಎನ್.ಆರ್.ರಮೇಶ್

0
24

ಕಾಂಗ್ರೆಸ್ ಮುಖಂಡರ 10 ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ 7 ಪ್ರಕರಣಗಳು, ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ 4 ದೂರುಗಳು, ಮಾಜಿ ಸಚಿವ ಯು. ಟಿ. ಖಾದರ್, ಜಮೀರ್ ಅಹಮದ್ ಹಾಗೂ ಕೃಷ್ಣ ಭೈರೇಗೌಡ ವಿರುದ್ಧ ತಲಾ 2 ದೂರುಗಳು ಮತ್ತು ಮಾಜಿ ಸಚಿವ ಎಂ.ಬಿ. ಪಾಟೀಲ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ, ಶಾಸಕರಾದ ಎನ್. ಎ. ಹ್ಯಾರೀಸ್ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ರವರುಗಳ ವಿರುದ್ಧ ತಲಾ 1 ದೂರುಗಳನ್ನು ದಾಖಲಿಸಲಾಗಿದೆ.

ಬೆಂಗಳೂರು, ಫೆ.2 – ಕೇಂದ್ರ ಸರ್ಕಾರ ನಿನ್ನೆಯಷ್ಟೇ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಬಿಜೆಪಿ ಮುಖಂಡನ ಮುಖಾಂತರ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇಸಲ್ಲಿಸಿದೆ.
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು, ಕಾಂಗ್ರೆಸ್ ಮುಖಂಡರ 10 ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಬರ್ಟ್ ವಾದ್ರಾ, ಮಾಜಿ ಸಚಿವರಾದ ಕೆ. ಜೆ. ಜಾರ್ಜ್, ಕೃಷ್ಣ ಭೈರೇಗೌಡ, ಯು. ಟಿ. ಖಾದರ್ , ಎಂ. ಬಿ. ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್. ಎಂ. ಕೃಷ್ಣಪ್ಪ, ಎನ್, ಎ. ಹ್ಯಾರೀಸ್ ಹಾಗೂ ಪ್ರಿಯಾ ಕೃಷ್ಣ ಅವರುಗಳ ವಿರುದ್ಧ 10 ದೂರುಗಳನ್ನು ದಾಖಲಿಸಿದ್ದಾರೆ. ಅದೇ ರೀತಿ 9 ಹಿರಿಯ ಐಎಎಸ್ ಅಧಿಕಾರಿಗಳು, ಐದು ಕೆಎಎಸ್ ಅಧಿಕಾರಿಗಳು ಸೇರಿದಂತೆ 21 ಮಂದಿ ಅಧಿಕಾರಿಗಳ ವಿರುದ್ಧವೂ ಅವರು ದೂರು ದಾಖಲಿಸಿದ್ದಾರೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ 10 ವಿವಿಧ ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ, ಪ್ರತ್ಯೇಕವಾದ 10 ದೂರುಗಳನ್ನು ಒಂದೇ ಬಾರಿಗೆ ಲೋಕಾಯುಕ್ತದಲ್ಲಿ ದಾಖಲಿಸಲಾಗಿದೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.
10 ಬೃಹತ್ ಹಗರಣ:
2013-2018 ರ ವರೆಗಿನ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದಿರುವ 10 ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ ಒಟ್ಟು 3,728 ಪುಟಗಳ ಸಂಪೂರ್ಣ ದಾಖಲೆಗಳ ಸಹಿತವಾಗಿ ಪ್ರತ್ಯೇಕವಾದ 10 ದೂರುಗಳನ್ನು ಒಂದೇ ಬಾರಿಗೆ ಲೋಕಾಯುಕ್ತದಲ್ಲಿ ದಾಖಲಿಸಿದ್ದಾರೆ.
ನಗರದಲ್ಲಿ ಗುರುವಾರ ಈ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಯು.ಟಿ. ಖಾದರ್, ಎಂ.ಬಿ.ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ ಹಾಗೂ ಶಾಸಕರಾದ ಎನ್. ಎ. ಹ್ಯಾರೀಸ್, ಮಾಜಿ ಶಾಸಕ ಪ್ರಿಯಾ ಕೃಷ್ಣ ವಿರುದ್ಧ ದೂರು ನೀಡಲಾಗಿದೆ.
ಅಧಿಕಾರಿಗಳ ವಿರುದ್ಧ ದೂರು:
ಅದೇ ರೀತಿ, ಹಿರಿಯ ಐಎಎಸ್ ಅಧಿಕಾರಿಗಳಾದ ಪಾಂಡುರಂಗ ಬಿ. ನಾಯಕ್, ಜಿ.ಸತೀಶ್, ಅತುಲ್ ಕುಮಾರ್ ತಿವಾರಿ, ವಸ್ತ್ರದ್, ವಿ. ಶಂಕರ್, ಮನೋಜ್ ರಾಜನ್, ಹಾಗೂ ಡಾ.ಪಿ. ಬೋರೇಗೌಡ, ಡಾ.ಲೀಲಾ ಸಂಪಿಗೆ, ಚಲುವರಾಜು ಮತ್ತು ಕೃಷ್ಣಮೂರ್ತಿ ಅವರ ವಿರುದ್ಧವೂ ದೂರುಗಳು ದಾಖಲಾಗಿವೆ ಎಂದರು.
ರಾಬರ್ಟ್ ವಾದ್ರಾ ವಿರುದ್ಧ ದೂರು:
ಇದಲ್ಲದೇ ಸೋನಿಯಾ ಗಾಂಧಿ ಅಳಿಯ ಮತ್ತು ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ರವರ ವಿರುದ್ಧವೂ ಸಹ ಸರ್ಕಾರೀ ಭೂ ಕಬಳಿಕೆ ಪ್ರಕರಣದ ದೂರು ದಾಖಲಾಗಿದ್ದು, ರಾಬರ್ಟ್ ವಾದ್ರಾ ಪಾಲುದಾರಿಕೆಯ ಡಿಎಲ್ ಎಫ್ ಸಂಸ್ಥೆಯು ಬೆಂಗಳೂರು ದಕ್ಷಿಣ ತಾಲ್ಲೂಕು ತಾವರೆಕೆರೆ ಹೋಬಳಿ ಗಂಗೇನಹಳ್ಳಿ ಗ್ರಾಮದ ಸರ್ವೆ ನಂ.1 ರಿಂದ 99, ವರ್ತೂರು ಗ್ರಾಮದ ಸರ್ವೆ ನಂ. 7, 8, 9, 10, ವರ್ತೂರು ನರಸೀಪುರ ಗ್ರಾಮದ ಸರ್ವೆ ನಂ. 1 ರಿಂದ 35 ಪೆದ್ದನಪಾಳ್ಯ ಗ್ರಾಮದ ಸರ್ವೆ ನಂ. 17, 18, 19, 20 ರಲ್ಲಿರುವ ಸುಮಾರು 9,600 ಕೋಟಿ ರೂಪಾಯಿಗಳಿಗೂ ಹೆಚ್ಚು ಬೆಲೆಬಾಳುವ 1,100 ಎಕರೆ ಸರ್ಕಾರಿ ಸ್ವತ್ತುಗಳನ್ನು ಕಬಳಿಸಿರುವ ಬೆಂಗಳೂರಿನ ಬೃಹತ್ ಭೂ ಕಬಳಿಕೆ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.
ಇಂದಿರಾ ಕ್ಯಾಂಟೀನ್ ಹಗರಣ:
ಇನ್ನೂ, ಬಿಬಿಎಂಪಿ ವ್ಯಾಪ್ತಿಯ 189 ಇಂದಿರಾ ಕ್ಯಾಂಟೀನ್ ಗಳ ಗ್ರಾಹಕರ ಹೆಸರಿನಲ್ಲಿ ಪ್ರತೀ ತಿಂಗಳು 11,52,74,273 ರೂಪಾಯಿಗಳಂತೆ 560 ಕೋಟಿ ರೂಪಾಯಿ ಹಣ ಕಬಳಿಸಿರುವ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಸಚಿವ ಕೆ.ಜೆ.ಜಾರ್ಜ್, ಪಾಲಿಕೆಯ ಹಣಕಾಸು ವಿಭಾಗದ ಹಿಂದಿನ ಜಂಟಿ ಆಯುಕ್ತ ಮನೋಜ್ ರಾಜನ್, ರಿವಾರ್ಡ್ ಸಂಸ್ಥೆಗಳು ಭಾಗಿಯಾಗಿವೆ ಎಂದರು. ಬಿಬಿಎಂಪಿ ವ್ಯಾಪ್ತಿಯ 439 ಬಸ್ ತಂಗುದಾಣಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಪಾಲಿಕೆಗೆ ನಿಯಮಾನುಸಾರ ಪಾವತಿಸಬೇಕಾಗಿದ್ದ 68.15 ಕೋಟಿ ರೂಪಾಯಿಗಳಷ್ಟು ಜಾಹೀರಾತು ಶುಲ್ಕವನ್ನು ಪಾವತಿಸದೇ ತಮ್ಮ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆ ಬಳಸಿಕೊಂಡಿದ್ದ 68.15 ಕೋಟಿ ಜಾಹಿರಾತು ಶುಲ್ಕ ವಂಚನೆ ಹಗರಣಯೂ ಇವರ ಬಹುಮುಖ್ಯ ಪಾತ್ರ ಇದೆ ಎಂದು ಆಪಾದಿಸಿದರು. ಕೃಷಿ ಹೊಂಡಗಳನ್ನು ನಿರ್ಮಿಸಿ ರೈತರಿಗೆ ಸಹಾಯ ಮಾಡುವ “ಕೃಷಿ ಭಾಗ್ಯ” ಯೋಜನೆಯ ಹೆಸರಿನಲ್ಲಿ ನಡೆದಿರುವ 800 ಕೋಟಿ ರೂಪಾಯಿಗಳ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಕೃಷಿ ಸಚಿವ ಕೃಷ್ಣ ಭೈರೇಗೌಡ, ಕೃಷಿ ಇಲಾಖೆಯ ಅಂದಿನ ಹಲವು ಅಧಿಕಾರಿಗಳು ಇದ್ದಾರೆ ಎಂದು ತಿಳಿಸಿದರು.
ಎಲ್ ಇಡಿ ಬೀದಿ ದೀಪಗಳ ಹಗರಣ:
ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ ಇಡಿ ಬೀದಿ ದೀಪಗಳ ಅಳವಡಿಕೆ ಯೋಜನೆಯ ಹೆಸರಿನಲ್ಲಿ ನಡೆದಿರುವ1,600 ಕೋಟಿ ರೂಪಾಯಿಗಳ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಸಚಿವ ಕೆ. ಜೆ. ಜಾರ್ಜ್ ಕೈವಾಡ ಇದೆ ಎಂದು ಆರೋಪಿಸಿದರು.ಹೀಗೆ, ಕೆಎಸ್ ಎಪಿಎಸ್ ಮೂಲಕ ನಡೆದಿರುವ ನೂರಾರು ಕೋಟಿ ಮೊತ್ತದ ಹಣ ದುರ್ಬಳಕೆ ಹಗರಣ ಮಾಜಿ ಆರೋಗ್ಯ ಸಚಿವ ಯು.ಟಿ.ಖಾದರ್, ಬಡ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಹೆಸರಿನಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ಹಗರಣ ಸೇರಿದಂತೆ ಒಟ್ಟು ನಾಲ್ಕು ರೀತಿಯ ವಿವಿಧ ಯೋಜನೆಗಳ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡಲಾಗಿದೆ ಎಂದು ಟೀಕಿಸಿದರು.
ಡೆಸ್ಟ್ ಬೀನ್ ಹಗರಣ:
ಬಿಬಿಎಂಪಿ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಒಳ ಡೆಸ್ಟ್ ಬೀನ್ ಹಗರಣ, ಸ್ವಚ್ಛ ಭಾರತ ಅಭಿಯಾನದ ಅನುಷ್ಠಾನದ ಹೆಸರಿನಲ್ಲಿ ಕಾನೂನುಬಾಹಿರವಾಗಿ ಅನುದಾನದ ದುರ್ಬಳಕೆ ಮಾಜಿ ಸಚಿವರಾದ ಕೃಷ್ಣ ಭೈರೇಗೌಡ, ಎಂ.ಕೃಷ್ಣಪ್ಪ ಮತ್ತು ಅಂದಿನ ಶಾಸಕರಾದ ಪ್ರಿಯಾ ಕೃಷ್ಣ, ಎನ್. ಎ. ಹ್ಯಾರೀಸ್, ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಭಾಗಿಯಾಗಿದ್ದಾರೆ.  ಅದೇ ರೀತಿ ವಿಶ್ವೇಶ್ವರಯ್ಯ ಜಲ ನಿಗಮದ ಕಾಮಗಾರಿಯೊಂದರ ಹೆಸರಿನಲ್ಲಿ 158 ಕೋಟಿ ಮೊತ್ತದ ಹಗರಣ ನಡೆದಿದ್ದು, ಇದರಲ್ಲಿ ಅಂದಿನ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರ ಪಾತ್ರವಿದೆ ಎಂದು ಎನ್.ಆರ್. ರಮೇಶ್ ಆರೋಪಿಸಿದರು.
ಈ ಸಂಬಂಧ ರಾಜ್ಯ ಸರ್ಕಾರ ಈ ಕೂಡಲೇ ಸಿಐಡಿ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದರು.
Advertisements

LEAVE A REPLY

Please enter your comment!
Please enter your name here