ಬೂಪಾಲ್ ನಲ್ಲಿ ರೈತರ ಬಂಧನ ಖಂಡಿಸಿ ಮೈಸೂರಿನಲ್ಲಿ ರಸ್ತೆ ತಡೆದು ರೈತ ಸಂಘಟನೆಗಳ ಪ್ರತಿಭಟನೆ

0
38
 ಮೈಸೂರು, ಫೆ. 12 – ನಾಳೆ ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಹಮ್ಮಿಕೊಂಡಿರುವ ಪ್ರತಿಣಟನೆಯಲ್ಲಿ ಭಾವಹಿಸಲು ನಗರದಿಂದ ತೆರಳುತ್ತಿದ್ದ ರೈತರು ಹಾಗೂ ರೈತ ಮಹಿಳೆಯರನ್ನು ಬೂಪಾಲ್ ರೈಲ್ವೆ ನಿಲ್ದಾಣದಲ್ಲಿ ತಡೆದು ಬಂಧಿಸಿರುವುದನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸಿದರು.
ನಗರದ ಗನ್ ಹೌಸ್ ವೃತ್ತದ ಬಳಿ ಸೋಮವಾರ ಬೆಳಿಗ್ಗೆ ಸಮಾವೇಶಗೊಂಡ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಧಿಕ್ಕಾರ ಕೂಗಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಳ್ಳಿ ದೇವರಾಜ್‌ ನೇತೃತ್ವಸಲ್ಲಿ ನಡೆದ ಪಗತಿಭಟನೆಯಲ್ಲಿ ಅವರು ಮಾತನಾಡುತ್ತಾ, ನಾಳೆ ಮಂಗಳವಾರ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ, ಕೃಷಿ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಹಾಗೂ ರೈತರ ಇನಿತರ ಸಮಸೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ದೇಶದ ಎಲ್ಲಾ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಈ ಪ್ರತಿಭಟನೆಯಲ್ಲಿ ಮೈಸೂರುನಗರದ ೫೬ ಮಂದಿ ರೈತರು ಹಾಗೂ ರೈತ ಮಹಿಳೆಯರು ಸೇರಿದಂತೆ ರಾಜ್ಯದಿಂದ ಹೊರಟಿದ್ದ  ನೂರಾರು ರೈತ ಕುಟುಂಬಗಳನ್ನು ಭಾನುವಾರ ಮದ್ಯ ರಾತ್ರಿ  ಸುಮಾರು 2 ಗಂಟೆ ಸಮಯದಲ್ಲಿ ಬೂಪಾಲ್ ರೈಲ್ವೆ ನಿಲ್ದಾಣದಲ್ಲಿ ರೈಲು,ತಡೆದು ಬಂಧನ ಮಾಡಿರುವುದನ್ನು ಖಂಡಿಸಿ ರಸ್ತೆ ತಡೆ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಕೇಂದ್ರ ಸರ್ಕಾರದ ಈ ರೈತ ವಿರೋಧಿ ನಡೆಯನ್ನು ಖಂಡಿಸಿದ ರೈತ ಸಂಘಟನೆಗಳು ಧಿಕ್ಕಾರ  ಕೂಗಿದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಯ ರೈತ ಮುಖಂಡರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here