ನವದೆಹಲಿ, ಫೆ.13 – ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬೆಳೆ ಬೆಂಬಲ ಬೆಲೆಗೆ ಆಗ್ರಹಿಸಿ ಮತ್ತೆ ರೈತರು ಬೃಹತ್ ಪ್ರತಿಭಟನೆಗೆ ಮುಂದಾಗಿರುವಂತೆಯೇ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನೇತೃತ್ವದ INDI ಮಿತ್ರಕೂಟ ಅಧಿಕಾರಕ್ಕೆ ಬಂದರೆ ರೈತರಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ ವೇಳೆ ದೆಹಲಿಯಲ್ಲಿನ ರೈತರ ಪ್ರತಿಭಟನೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election) ವಿರೋಧ ಪಕ್ಷದ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಖಾತ್ರಿಪಡಿಸುವ ಕಾನೂನನ್ನು I.N.D.I.A ಬ್ಲಾಕ್ ತರಲಿದೆ ಎಂದು ಹೇಳಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ದೇಶಾದ್ಯಂತ ರೈತರ ಬಹುಕಾಲದ ಬೇಡಿಕೆಯಾಗಿದೆ. ವಿವಿಧ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿಯನ್ನು ರಕ್ಷಿಸುವ ಕಾನೂನನ್ನು ಜಾರಿಗೊಳಿಸುವ ಭರವಸೆಯು ಕಾಂಗ್ರೆಸ್ ನಾಯಕತ್ವದಿಂದ ನಿರ್ಣಾಯಕ ಭರವಸೆಯಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಐತಿಹಾಸಿಕ ಪ್ರತಿಜ್ಞೆ ತೆಗೆದುಕೊಂಡಿದ್ದು, ಸ್ವಾಮಿನಾಥನ್ ಸಮಿತಿ ವರದಿ ಪ್ರಕಾರ ಎಂಎಸ್‌ಪಿ ಕಾನೂನು ರೂಪಿಸುವ ಮೂಲಕ ರೈತರಿಗೆ ನ್ಯಾಯಯುತ ಬೆಲೆಯನ್ನು ಖಾತರಿಪಡಿಸುತ್ತೇವೆ. ಇದರಿಂದ 15 ಕೋಟಿ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
कांग्रेस की गारंटी 📢
किसानों को स्वामीनाथन कमीशन के अनुसार MSP की गारंटी देंगे।
: @RahulGandhi जी
📍 छत्तीसगढ़ pic.twitter.com/6J9jImKSIi
— Congress (@INCIndia) February 13, 2024
ಅಂತೆಯೇ ಇಂದು “ರೈತ ಸಹೋದರರಿಗೆ ಐತಿಹಾಸಿಕ ದಿನ” ಎಂದು ಹೇಳಿದರು. ಸ್ವಾಮಿನಾಥನ್ ಆಯೋಗದ ಪ್ರಕಾರ ಬೆಳೆಗಳ ಮೇಲೆ ಪ್ರತಿ ರೈತರಿಗೆ ಎಂಎಸ್‌ಪಿ ಕಾನೂನುಬದ್ಧ ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮವು 15 ಕೋಟಿ ರೈತ ಕುಟುಂಬಗಳ ಏಳಿಗೆಯನ್ನು ಖಾತ್ರಿಪಡಿಸುವ ಮೂಲಕ ಅವರ ಜೀವನವನ್ನು ಬದಲಾಯಿಸುತ್ತದೆ ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನ್ಯಾಯ್ (ನ್ಯಾಯ) ಹಾದಿಯಲ್ಲಿ ಇದು ಕಾಂಗ್ರೆಸ್‌ನ ಮೊದಲ ಖಾತರಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.