ಸೋನಿಯಾ, ರಾಹುಲ್, ಪ್ರಿಯಾಂಕಾ, ಸಿಸೋಡಿಯಾ ವಿರುದ್ಧ ಎಫ್ಐಆರ್ ಕೋರಿ ದೆಹಲಿ ಹೈಕೋರ್ಟ್ ಅರ್ಜಿ

0
147

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರ ವಿರುದ್ಧ ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

Advertisements

ದ್ವೇಷದ ಭಾಷಣ ಮಾಡಿದ ಈ ಎಲ್ಲಾ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಮತ್ತು ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಕೋರ್ಟ್ ಗೆ ಮನವಿ ಮಾಡಲಾಗಿದೆ.

ಹಿಂದೂ ಸೇನಾ ಸಹ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಎಐಎಂಐಎಂ ನಾಯಕರಾದ ಅಸಾದುದ್ದೀನ್ ಓವೈಸಿ ಹಾಗೂ ಅಕ್ಬರುದ್ದೀನ್ ಓವೈಸಿ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಸ್ ದಾಖಲಿಸಬೇಕು ಎಂದು ಮನವಿ ಮಾಡಲಾಗಿದೆ. 34 ಮಂದಿಯನ್ನು ಬಲಿ ಪಡೆದ ದೆಹಲಿಯ ಕೋಮುಗಲಭೆಗೆ ಎಐಎಂಐಎಂ ನಾಯಕ ವಾರಿಸ್ ಪಠಾಣ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಅರ್ಜಿಯಲ್ಲಿ ಆರೋಪಿಸಲಾಗಿದೆ.

Advertisements

LEAVE A REPLY

Please enter your comment!
Please enter your name here