ರಸ್ತೆ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ನಡೆದ ಗಲಾಟೆ ಕುರಿತಂತೆ ನಟ ಯಶ್ ಪ್ರತಿಕ್ರಿಯಿಸಿದ್ದು, ನಾನು ಹಾಸನದವನೂ ಹೌದು. ಅದಕ್ಕಿಂತ ಹೆಚ್ಚಾಗಿ ಕರ್ನಾಟಕದವನು. ಎಲ್ಲಿ ಬೇಕಾದರೂ ಜಮೀನು ಕೊಂಡುಕೊಳ್ತೀನಿ ಎಂದಿದ್ದಾರೆ.
ಹಾಸನ,ಮಾ.9 – ಹಾಸನದ ತಿಮ್ಮಲಾಪುರದಲ್ಲಿ ಕೃಷಿ ಜಮೀನಿಗೆ ಕಾಂಪೌಂಡ್ ನಿರ್ಮಿಸುವಾಗ ರಸ್ತೆ ವಿಚಾರಕ್ಕೆ ಸಂಬಂಧಿಸಿ ಗ್ರಾಮಸ್ಥರು ಹಾಗೂ ಯಶ್ ಪೋಷಕರ ನಡುವೆ ಸೋಮವಾರ ಜಗಳವಾಗಿತ್ತು. ಈ ಸಂಬಂಧ ಮಂಗಳವಾರ ಸ್ವತಃ ಯಶ್ ಸ್ಪಷ್ಟನೆ ನೀಡಿದ್ದಾರೆ.
ತಮ್ಮ ಜಮೀನಿಗೆ ರಸ್ತೆ ನಿರ್ಮಿಸುವ ವಿಚಾರವಾಗಿ ಯಶ್ ಕುಟುಂಬದವರ ಜೊತೆ ತಿಮ್ಮೇನಹಳ್ಳಿ ಗ್ರಾಮದವರು ಗಲಾಟೆ ನಡೆಸಿದ್ದರು.
ಯಶ್ ಅವರ ತಂದೆ ಅರುಣ್ ಕುಮಾರ್ ಮತ್ತು ತಾಯಿ ಪುಷ್ಪ ಇಬ್ಬರು ತಮ್ಮ ಜಮೀನಿನಲ್ಲಿ ಕೆಲಸ ಮಾಡಿಸುತ್ತಿರುವಾಗ ಗ್ರಾಮಸ್ಥರ ನಡುವೆ ಮಾತಿಗೆ ಮಾತು ಬೆಳೆದಿದೆ. ಜಮೀನಿಗೆ ರಸ್ತೆ ನಿರ್ಮಾಣ ಮಾಡಲು ಜೆಸಿಬಿಯಲ್ಲಿ ಕೆಲಸ ಮಾಡಿಸುತ್ತಿದ್ದ ವೇಳೆ ಗ್ರಾಮಸ್ಥರು ಅಡ್ಡಿ ಪಡಿಸಿದ್ದಾರೆ.
ಈ ವೇಳೆ ಶುರುವಾದ ಗಲಾಟೆ ಮಾತಿಗೆ ಮಾತು ಬೆಳೆದು ಯಶ್ ಬೆಂಬಲಿಗರು ಮತ್ತು ಗ್ರಾಮಸ್ಥರ ನಡುವೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಧ್ಯಸ್ಥಿಕೆ ವಹಿಸಿ ಗ್ರಾಮಸ್ಥರನ್ನು ಸಮಾಧಾನ ಪಡಿಸಿದ್ದಾರೆ.
Advertisements