ಪ್ರತಿಯೊಬ್ಬರಿಗೂ ಮತದಾನದ ಅರಿವು ಮುಖ್ಯ: ಡಾ. ಕೆ. ವಿ. ರಾಜೇಂದ್ರ

0
49

ಮೈಸೂರು ಮಾ.20-  ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವು ಹೌದು. ಪ್ರತಿಯೊಂದು ಮತ ಒಂದು ದೇಶದ ಬೆಳೆವಣಿಗೆಗೆ ಉಪಯುಕ್ತವಾಗಿರುತ್ತದೆ. ಪ್ರತಿಯೊಬ್ಬರಲ್ಲಿಯೂ ಮತದಾನದ ಅರಿವು ಮೂಡಿಸುವುದು ಮುಖ್ಯ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ  ಹಾಗೂ  ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಚುನಾವಣೆಯ ಬಗ್ಗೆ ಅರಿವು ಮೂಡಿಸುವ  ಕ್ಯಾಂಡಲ್ ಲೈಟ್ ಮಾರ್ಚ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಚುನಾವಣಾ ಸಂದರ್ಭದಲ್ಲಿ ಯಾರು ಕೂಡ ಹಣದ ಆಮಿಷಕ್ಕೆ ಸಿಲುಕಿ ನಿಮ್ಮ ಮತಗಳನ್ನು ನೀಡಬಾರದು. ಸಾರ್ವಜನಿಕರಲ್ಲಿ ಮತದಾನದ ಅರಿವನ್ನು ಮೂಡಿಸಿ ಉತ್ತಮ ಮತದಾನ ಪ್ರಕ್ರಿಯೆ ನಡೆಸಲು ಜಿಲ್ಲಾಡಳಿತದ ಜೊತೆ ಗೂಡಿ ಸಹಕರಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಸಿಬ್ಬಂದಿ ವರ್ಗದವರು ಕ್ಯಾಂಡಲ್ ಹಚ್ಚುವುದರ ಮೂಲಕ  ಮತದಾನ ಮಾಡುವುದು  ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳುತ್ತೇವೆ ಎಂದು  ತಿಳಿಸಿದರು .

ಕಾರ್ಯಕ್ರಮದಲ್ಲಿ  ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಣಾಧಿಕಾರಿಗಳಾದ ಗಾಯತ್ರಿ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ , ಸ್ವೀಪ್ ಸಮಿತಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರು ಪಾಲ್ಗೊಂಡಿದ್ದರು.

Advertisements

LEAVE A REPLY

Please enter your comment!
Please enter your name here