ಎಸ್ಸಿ ಎಸ್ಟಿ ಮೀಸಲಾತಿ ವಿಳಂಬ: ಸರ್ಕಾರದ ವಿರುದ್ಧ ರಾಜಭವನಕ್ಕೆ ಹೊರಟ ಕಾಂಗ್ರಸ್- ಡಿಕೆಶಿ, ಸಿದ್ಧರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ

0
34

ಬೆಂಗಳೂರು,ಮಾ.24-   ಎಸ್ ಸಿ ಎಸ್ ಟಿ ಮೀಸಲಾತಿ ವಿಚಾರದಲ್ಲಿ ದ್ರೋಹ, ಮೀಸಲಾತಿ ಜಾರಿಯಲ್ಲಿ ವಿಳಂಬ ಆರೋಪದ ಮೇಲೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು.

ಎಸ್ ಸಿ ಮತ್ತು ಎಸ್ ಟಿ ಮೀಸಲಾತಿ ವಿಚಾರದಲ್ಲಿ ಸರ್ಕಾರ ದ್ರೋಹವೆಸಗುತ್ತಿದೆ ಎಂದು ಆರೋಪಿಸಿ ವಿಪಕ್ಷ ನಾಯಕ ಸಿದ‍್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಕೆಪಿಸಿಸಿ ಕಚೇರಿಯಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದರು.

ಆದರೆ ಕಾಂಗ್ರೆಸ್ ನಾಯಕರ ರಾಜಭವನ ಚಲೋವನ್ನ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದು, ಈ ವೇಳೆ ಪೊಲೀಸರು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಕಾಂಗ್ರೆಸ್ ನಾಯಕರು ರಸ್ತೆಯಲ್ಲೇ ಕುಳಿತು ಧರಣಿ ನಡೆಸಲು ಮುಂದಾದರು. ಈ ಸಮಯದಲ್ಲಿ ಪೊಲೀಸರು ಸಿದ್ಧರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರನ್ನ ವಶಕ್ಕೆ ಪಡೆದರು.

Advertisements

LEAVE A REPLY

Please enter your comment!
Please enter your name here