ನವದೆಹಲಿ, ಮಾ.24 – ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಮೊದಲ ಬಾರಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ನಾನು ಭಾರತೀಯರ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಇದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಶುಕ್ರವಾರ ಹೇಳಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ 52 ವರ್ಷದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, “ನಾನು ಭಾರತೀಯರ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಇದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ” ಎಂದು ತಿಳಿಸಿದ್ದಾರೆ.
मैं भारत की आवाज़ के लिए लड़ रहा हूं।
मैं हर कीमत चुकाने को तैयार हूं।
— Rahul Gandhi (@RahulGandhi) March 24, 2023