ಸೂಪರ್ ಸ್ಟಾರ್ ರಜನಿಕಾಂತ್ ಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

0
39

ನಾನು ಅತ್ಯಂತ ‘ವಿನಮ್ರ’, ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಡಿಯಪ್ಪ.

ನವದೆಹಲಿ,ಏ.1 – 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟವಾಗಿದ್ದು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಈ ಬಾರಿ ಪ್ರಶಸ್ತಿ ಒಲಿದಿದೆ.

Advertisements

2019ನೇ ಸಾಲಿನ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ದಕ್ಷಿಣ ಭಾರತದ ಖ್ಯಾತ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನೀಡಲಾಗುತ್ತಿದೆ. ಅವರನ್ನು ಆಯ್ಕೆ ಮಾಡಿದ ಪ್ರಶಸ್ತಿ ಪುರಸ್ಕೃತರ ಆಯ್ಕೆ ತಂಡಕ್ಕೆ ನನ್ನ ಧನ್ಯವಾದಗಳು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಮೇ 3ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಪ್ರಕಾಶ್ ಜಾವ್ಡೇಕರ್ ಸುದ್ದಿಗೋಷ್ಠಿಯಲ್ಲಿಂದು ಪ್ರಕಟಿಸಿದ್ದಾರೆ. ಮೂಲತಃ ಕನ್ನಡಿಗರಾದ ರಜನಿಕಾಂತ್, ಅವಕಾಶ ಅರಿಸಿ ತಮಿಳುನಾಡಿಗೆ ತೆರಳಿ ಅಲ್ಲಿನ ಚಿತ್ರರಂಗದಲ್ಲಿ ಮೇರು ವ್ಯಕ್ತಿಯಾಗಿ ಬೆಳೆದಿದ್ದಾರೆ.

ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಡಿಯಪ್ಪ:

ನವದೆಹಲಿ: ದಾದಾ ಸಾಹೇಬ್ ಪ್ರಶಸ್ತಿ ಪುರಸ್ಕೃತ ಸೂಪರ್ ಸ್ಟಾರ್ ರಜನೀಕಾಂತ್ ಅವರಿಗೆ ಪ್ರಧಾನಿ ನರೇಂದ್ರಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

‘ರಜನೀಕಾಂತ್ ಅವರು ವೈವಿಧ್ಯಮ ಪಾತ್ರಗಳು ಮತ್ತು ವ್ಯಕ್ತಿತ್ವದಿಂದ ಎಲ್ಲ ವಯೋಮಾನದವರಲ್ಲೂ ಜನಪ್ರಿಯರಾಗಿದ್ದಾರೆ. ತಲೈವಾ ರಜನೀಕಾಂತ್ ಅವರಿಗೆ ಚಲನಚಿತ್ರರಂಗದ ಅತ್ಯುನ್ನತ ಪುರಸ್ಕಾರ ದೊರೆತಿರುವುದಕ್ಕೆ ಸಂತಸವಾಗುತ್ತಿದೆ.’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು. ಇದಕ್ಕೆ ರಜನಿ ಕಾಂತ್ ಸಹ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

Advertisements

LEAVE A REPLY

Please enter your comment!
Please enter your name here