ಕೊರೋನಾಗೆ ಕರ್ನಾಟಕ ಅಕ್ಷರಶಃ ತತ್ತರ : ಇಂದು 299 ಹೊಸ ಪಾಸಿಟಿವ್ ಪ್ರಕರಣ, 2 ಸಾವು

0
93

ಬೆಂಗಳೂರು: ಕೊರೋನಾ ವೈರಸ್ ಗೆ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಬರೊಬ್ಬರಿ 299 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಗರಿಷ್ಠ ಪ್ರಮಾಣದ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 299 ಹೊಸ ಪ್ರಕರಣ  ದಾಖಲಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆಯಾಗಿದೆ. 

ಅಂತೆಯೇ ಬೀದರ್ ಮತ್ತು ರಾಯಚೂರಿನಲ್ಲಿ ಇಬ್ಬರು ಸೋಂಕಿತರು ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

1,218 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,950 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

299 ಸೋಂಕಿತರ ಪೈಕಿ 253 ಮಹಾರಾಷ್ಟ್ರದಿಂದ ಬಂದವರು
ಇನ್ನು ಇಂದು ಪತ್ತೆಯಾಗಿರುವ 299 ಸೋಂಕಿತರ ಪೈಕಿ 253 ಮಂದಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದವರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here