ಮೈಸೂರು: ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮರಣೆ

0
87

ಮೈಸೂರು, ಜೂ. 4 – ನಗರದಲ್ಲಿ ಇಂದು ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ಅರಮನೆ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮ ಕರ್ನಾಟಕ ಕಲಾಮಂದಿರದಲ್ಲಿ ನಡೆಯಿತು.

ಇದಕ್ಕೂ ಮುನ್ನ ಜಯಂತಿ ಅಂಗವಾಗಿ ಅರಮನೆ ಆವರಣದಲ್ಲಿನ ವೆಂಕಟರಮಣಸ್ವಾಮಿ ದೇವಸ್ಥಾನದ ಮುಂಭಾಗದಿಂದ ವಿವಿಧ ಕಲಾತಂಡಗಳೊoದಿಗೆ ಮೆರವಣಿಗೆ ಹೊರಟು ಕಲಾಮಂದಿರ ತಲುಪಲಾಯಿತು.

ಮೆರವಣಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

LEAVE A REPLY

Please enter your comment!
Please enter your name here