ಮಂಡ್ಯ, ಜೂ.13 – ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಅತ್ತಿಗೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ಕಂಬದಹಳ್ಳಿಯಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ನಡೆದ ಘಟನೆಯಲ್ಲಿ ನಾದಿನಿ ಗಿರಿಜಾ (31)ಅತ್ತಿಗೆ ಪ್ರಿಯಾಂಕಾ (32) ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಸಹ ನೇಣಿಗೆ ಶರಣಾಗಿದ್ದಾಳೆ.
ಪ್ರಿಯಾಂಕಾ ಹಾಗೂ ಗಿರಿಜಾ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ನಿನ್ನೆ ಸಹ ಇಬ್ಬರ ಜಗಳ ನಡೆದಿದೆ. ಆ ವೇಳೆ ಗಿರಿಜಾ ಅತ್ತಿಗೆಯನ್ನು ಕೊಂದಿದ್ದಾಳೆ.
ಘಟನೆ ಸಂಬಂಧ ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.