‘ಕೆ.ಜಿ.ಎಫ್ 2’ ಆಡಿಯೋ ಲಹರಿ ಮ್ಯೂಸಿಕ್ ಹಕ್ಕು ಪಡೆದಿದೆ

0
33

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಹೊಂಬಾಳೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಜಯ್ ಕಿರಂಗದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದ ಕೆ.ಜಿ.ಎಫ್ 2 ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ.

ಖ್ಯಾತ ಮ್ಯೂಸಿಕ್ ಸಂಸ್ಥೆ ಲಹರಿ ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ.‌ ಹಲವು ಭಾಷೆಗಳಲ್ಲಿ ಕೆ.ಜಿ.ಎಫ್ 2 ಚಿತ್ರ ನಿರ್ಮಾಣವಾಗಿದ್ದು, ರವಿ ಬಸ್ರೂರು ಸಂಗೀತ ನೀಡಿದ್ದಾರೆ.

ಕೆಜಿಎಫ್-2 ಚಿತ್ರದಲ್ಲಿ ಒಟ್ಟು ಆರು ಹಾಡುಗಳಿವೆ. ಈ ಹಿಂದೆ ಕೆಜಿಎಫ್ ಚಾಪ್ಟರ್-1ರ ಹಾಡುಗಳ ಹಕ್ಕನ್ನೂ ಸಹ ಲಹರಿ ಸಂಸ್ಥೆಯೇ ಖರೀದಿಸಿತ್ತು.

ಕೆಲವೇ ದಿನಗಳಲ್ಲಿ ಚಿತ್ರದ ಹಾಡುಗಳು ಮಾರುಕಟ್ಟೆಗೆ ಬರಲಿದೆ ಎನ್ನಲಾಗಿದೆ. ಇನ್ನು ಇದೇ ಜುಲೈ 16ಕ್ಕೆ ಚಿತ್ರಮಂದಿರಗಳಲ್ಲಿ  ಕೆ.ಜಿ.ಎಫ್ 2 ತೆರೆ ಕಾಣಲಿದೆ ಎನ್ನಲಾಗಿತ್ತು.

ಆದರೆ ಕೊರೋನಾ ಅಲೆ ಕಾರಣ ಸ್ಥಗಿತಗೊಂಡ ಚಿತ್ರಮಂದಿರಗಳಿನ್ನೂ ಕಾರ್ಯಾರಂಬ ಮಾಡಿಲ್ಲದ ಕಾರಣ ಮತ್ತೆ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುವ ಸಂಭವವಿದೆ.

LEAVE A REPLY

Please enter your comment!
Please enter your name here