ಮೈಸೂರು,ಜು.31- ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರಲು ಬಿಎಸ್ ಯಡಿಯೂರಪ್ಪನ ಕೈಯಲ್ಲೂ ಆಗಲಿಲ್ಲ. ಇನ್ನು ಬಸವರಾಜ ಬೊಮ್ಮಾಯಿಗೆ ಆಗುತ್ತಾ.? ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯಲ್ಲೇ ಬೆಳೆದ ಯಡಿಯೂರಪ್ಪಗೆ ಅನುದಾನ ತರಲು ಸಾಧ್ಯವಾಗಲಿಲ್ಲ.
ಇನ್ನು ಜನತಾದಳದಿಂದ ಹೋದ ಬಸವರಾಜ ಬೊಮ್ಮಾಯಿಗೆ ಆಗುತ್ತಾ.? ಜನತಾದಳದಿಂದ ಹೋದವರ ಮಾತು ಕೇಳುತ್ತಾರಾ.? ಎಂದು ಪ್ರಶ್ನಿಸಿದರು. ಈ ಮೂಲಕ ಮತ್ತೆ ಜನತಾದಳದಿಂದ ಸಿಎಂ ಆದರು ಎಂದು ಉಲ್ಲೇಖಿಸಿದರು.
ಸಚಿವ ಸಂಪುಟ ಆಗಬೇಕಿತ್ತು ನೆನ್ನೆ ಚರ್ಚೆ ಮಾಡಿಲ್ಲ. ಮುಂದಿನ ಬಾರಿ ಆಗಬಹುದು. ಕೊರೊನಾ ಹಿನ್ನೆಲೆಯಲ್ಲಿ ಆದಷ್ಟು ಬೇಗ ಪರಿಗಣಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಕೋವಿಡ್ 3ನೇ ಅಲೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಸರ್ಕಾರ ಕೊರೊನಾ 3ನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ರಾಜ್ಯ ಕೊರೊನಾ ಮೂರನೇ ಅಲೆಗೆ ಸಿಲುಕಲಿದೆ.
ಸಚಿವರು ಇಲ್ಲದಿದ್ದರೂ ಅಧಿಕಾರಿಗಳ ಮೂಲಕ ನಿರ್ವಹಣೆ ಮಾಡಬೇಕು.ಸಚಿವರು ಇದ್ದರೆ ಅವರೇನು ಗಡಿಗೆ ಬೀಗ ಹಾಕಲು ಸಾಧ್ಯವಿಲ್ಲ. ಅಧಿಕಾರಿಗಳ ಮೂಲಕ ಈ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರದ ಏಕ ವ್ಯಕ್ತಿಯಿಂದ ಕೊರೊನಾ ನಿಯಂತ್ರಣ ಸಾಧ್ಯವಿಲ್ಲ. ಆದಷ್ಟು ಬೇಗವಸಚಿವ ಸಂಪುಟ ಆಗಬೇಕು. ಕೇರಳ, ಮಹಾರಾಷ್ಟ್ರದಿಂದ ಬರುವವರನ್ನು ತಡೆಯಬೇಕು. ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದೆ.
ಕಳೆದ ಬಾರಿಯ ನೆರೆ ಪರಿಹಾರವೇ ಇನ್ನು ಸರ್ಕಾರ ನೀಡಿಲ್ಲ. ಮನೆ ಬಿದ್ದವರಿಗೆ 10 ಸಾವಿರ ಪರಿಹಾಸ ಸಹಾ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.