ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ: `ನಮ್ಮೂರ ಭೂಮಿ ನಮಗಿರಲಿ ಅನ್ಯರಿಗಲ್ಲ’ ಪತ್ರ ಚಳುವಳ

0
201

ಮೈಸೂರು,ಆ,3 –  ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.

Advertisements

ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರೈತ ಸಂಘಟನೆಗಳ ಒಕ್ಕೂಟದಿಂದ ಮೈಸೂರು ಬನ್ನೂರು ರಸ್ತೆಯಲ್ಲಿರುವ ದೇವೇಗೌಡ ವೃತ್ತದಲ್ಲಿ ಹಿರಿಯ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಭೂ ಸುಧರಾಣೆ ಕಾಯ್ದೆಗೆ ತಿದ್ದುಪಡಿ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ತಿಭಟನೆ ವೇಳೆ ಮಾತನಾಡಿದ ರೈತ ಮುಖಂಡ ಕುರುಬರು ಶಾಂತಕುಮಾರ್ , ರಾಜ್ಯ ಸರ್ಕಾರ ಕಾರ್ಫೊರೇಟ್ ಪರ ಕೆಲಸ ಮಾಡುತ್ತಿದೆ. ರೈತರು ಇದರಿಂದಾಗಿ ಭೂಮಿಯನ್ನು ಕಳೆದುಕೊಳ್ಳುವರೆಂದು ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಜಾಗೃತಿ ಮೂಡಿಸುವ ಸಲುವಾಗಿ ಇಂದು ರಾಜ್ಯಾದ್ಯಂತ ಈ ಬಗ್ಗೆ ನಾಮಫಲಕ ಹಾಕಲಾಗುತ್ತಿದೆ. ಆಗಸ್ಟ್ 15 ರಂದು ಜಿಲ್ಲಾಧಿಕಾರಿ ಕಚೇರಿಯ ಬಳಿ‌ ಕರಾಳ ದಿನಾಚರಣೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

Advertisements

LEAVE A REPLY

Please enter your comment!
Please enter your name here