ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೊರೋನಾ ಸೋಂಕು ದೃಢವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಯಾವುದೇ ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.
ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರಿಗೆ ಎರಡು ದಿನಗಳಿಂದ ಜ್ವರ ಕೂಡಾ ಇತ್ತು. ಈ ಹಿನ್ನೆಲೆ ವೈದ್ಯರ ಸೂಚನೆಯಂತೆ ನಗರದ ಮಣಿಪಾಲ ಆಸ್ಪತ್ರೆಗೆ ಸೋಮವಾರ ರಾತ್ರಿ ದಾಖಲಾಗಿದ್ದಾರೆ.