
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು
ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.