ಆರೋಗ್ಯ ಸೇತು ಆ್ಯಪ್: ನಿಲುವು ಸ್ಪಷ್ಟಪಡಿಸಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ‘ಹೈ’ ಸೂಚನೆ

0
261

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಸಂಪರ್ಕಗಳನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ ಆರೋಗ್ಯ ಸೇತು ಮೊಬೈಲ್ ಆ್ಯಪ್ ಡೌನ್ಲೋಡ್ ಹಾಗೂ ಬಳಕೆ ಕಡ್ಡಾಯವೇ ಎಂಬುದನ್ನು ಸ್ಪಷ್ಟಪಡಿಸಿದ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. 

Advertisements

ಹಲವು ಸೇವೆಗಳಿಗೆ ಆ್ಯಪ್ ಬಳಕೆ ಕಡ್ಡಾಯ ಮಾಡಿರುವುದನ್ನು ಪ್ರಶ್ನಿಸಿ ಅನಿವರ್ ಎ. ಅರವಿಂದ್ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. 

ವಿಮಾನ ಪ್ರಯಾಣಕ್ಕೆ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳುವುದನ್ನು ಎಎಐ ಕಡ್ಡಾಯಗೊಳಿಸಿ ಜು.30 ರಂದು ಎಲ್ಲಾ ವಿಮಾನ ನಿಲ್ದಾಣಗಳಿಗೆ ಸೂಚನೆ ನೀಡಿದೆ ಎಂದು ಅರ್ಜಿದಾರರ ಪರ ವಕೀಲರು ವಿಚಾರಣೆ ವೇಳೆ ತಿಳಿಸಿದರು. 

ಇದು ಪ್ರಯಾಣಿಕರಿಗೆ ನೀಡಿರುವ ಸಲಹೆಯಷ್ಟೇ. ಸ್ವಯಂ ಪ್ರೇರಿತವಾಗಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಲು ಅವರಿಗೆ ತಿಳಿಸಲಾಗಿದೆ. ಸೋಂಕು ಹರಡುವುದನ್ನು ಕಡಿಮೆ ಮಾಡುವುದು ಇದರ ಉದ್ದೇಶ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ವಿವರಿಸಿದರು. 

ಮೆಟ್ರೋ ರೈಲು ಪ್ರಯಾಣಿಕರೂ ಕೂಡ ಪ್ರಯಾಣದ ವೇಳೆ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬೇಕೆಂದು ಬಿಎಂಆರ್ಸಿಎಲ್ ತಿಳಿಸಿದೆ. ಯಾವುದೇ ಒಂದು ಆ್ಯಪ್ ಕಡ್ಡಾಯಗೊಳಿಸಲು ಯಾವುದೇ ಕಾನೂನು ಅನುಮತಿಸುವುದಿಲ್ಲ ಎಂದು ಅರ್ಜಿದಾರರು ವಿಚಾರಣೆ ವೇಳೆ ಹೇಳಿದರು. 

ಅದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ಆ್ಯಪ್ ಬಳಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವು ಏನು? ಈ ಸಂಬಂಧ ರಾಜ್ಯದ 5 ವಿಮಾನ ನಿಲ್ದಾಣಗಳಿಗೆ ರಾಜ್ಯ ಸರ್ಕಾರ ಸೂಚನೆಗಳನ್ನೇನಾದರೂ ಹೊರಡಿಸಿದದೆಯೇ? ಎಂಬ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿತು. 

ಆ್ಯಪ್ ಬಳಕೆ ಕಡ್ಡಾಯಗೊಳಿಸಿ ಹೊರಡಿಸಲಾಗಿರುವ ಸೂಚನೆ ಬಗ್ಗೆ ಸ್ಪಷ್ಟನೆ ನೀಡುವಂತೆ ಭಾರತೀಯ ವಿಮಾನಯಾನ ಪ್ರಾಧಿಕಾರದ ಪರ ವಕೀಲರಿಗೆ ನ್ಯಾಯಪೀಠ ಸೂಚಿಸಿದ್ದು, ಆಗಸ್ಟ್ 31ರವರೆಗೆ ಮೆಟ್ರೋ ಸಂಚಾರಕ್ಕೆ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಹಾಗಾದರೆ, ಮೆಟ್ರೋ ಸಂಚಾರ ಆರಂಭವಾದ ಮೇಲೆ ಆ್ಯಪ್ ಬಳಸಬೇಕು ಎಂದು ಹೇಳಿರುವ ಬಗ್ಗೆ ವಿವರಣೆ ನೀಡುವಂತೆ ಬಿಎಂಆರ್’ಸಿಎಲ್ ಪರ ವಕೀಲರಿಗೆ ನ್ಯಾಯಪೀಠ ಸೂಚಿಸಿದ್ದು, ವಿಚಾರಣೆಯನ್ನು ಆ.13ಕ್ಕೆ ಮುಂದೂಡಿತು. 

Advertisements

LEAVE A REPLY

Please enter your comment!
Please enter your name here