“ಹಂಟರ್” ಆಗಲಿದ್ದಾರೆ ನಿರಂಜನ್ ಸುಧೀಂದ್ರ

0
8

ಶೀರ್ಷಿಕೆ ಅನಾವರಣ ಮಾಡಿ ಶುಭ ಕೋರಿದ ಸೂಪರ್ ಸ್ಟಾರ್ ಉಪೇಂದ್ರ

ಪ್ಯಾನ್ ಇಂಡಿಯಾ ಸಿನಿಮಾಕ್ಕೆ ತ್ರಿವಿಕ್ರಮ ಸಾಫಲ್ಯ ನಿರ್ಮಾಣ-  ವಿನಯ್ ಕೃಷ್ಣ ನಿರ್ದೇಶನ. ಸೂಪರ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ “ಹಂಟರ್” ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ನಿರಂಜನ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರದ  ಫಸ್ಟ್ ಲುಕ್ ಹಾಗೂ ಶೀರ್ಷಿಕೆಯನ್ನು  ಸೂಪರ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಅನಾವರಣಗೊಳಿಸಿ ಶುಭ ಕೋರಿದ್ದಾರೆ.
ವಿನಯ್ ಕೃಷ್ಣ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ.  ಸೀಜರ್ ಚಿತ್ರವನ್ನು ನಿರ್ದೇಶಿಸಿದ್ದ, ವಿನಯ್ ಕೃಷ್ಣ ಅವರಿಗೆ ಇದು ಎರಡನೇ ಚಿತ್ರ.
ಈ ಹಿಂದೆ ಪರಿ, ಸೀಜರ್ ಚಿತ್ರಗಳನ್ನು ನಿರ್ಮಿಸಿದ್ದ, ತ್ರಿವಿಕ್ರಮ ಸಾಫಲ್ಯ ತಮ್ಮ ತ್ರಿವಿಕ್ರಮ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.
ಹೆಸರಾಂತ ಗಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆಯುತ್ತಿದ್ದಾರೆ.
ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ಅಂತ್ಯದ ವೇಳೆಗೆ ಶುರುವಾಗಲಿದೆ.
ಕೇರಳದ ಸೌಮ್ಯ ಮೆನನ್ ನಿರಂಜನ್ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ.

LEAVE A REPLY

Please enter your comment!
Please enter your name here