ಚಂದ್ರಯಾನ-3 ಯಶಸ್ಸಿ: ಇಸ್ರೋ ಅಧ್ಯಕ್ಷರಿಗೆ ಅಭಿನಂಧಿಸಿದ ಪ್ರಧಾನಿ ಮೋದಿ-ಮುಖ್ಯಮಂತ್ರಿ ಸಿದ್ದರಾಮಯ್ಯ

0
31

ಬೆಂಗಳೂರು ಆ. 23 – ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅಭಿನಂದಿಸಿದರು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ:

ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ.

 

ಬಾಹ್ಯಾಕಾಶ ವಿಜ್ಞಾನಕ್ಕೆ ಪ್ರಾರಂಭದ ದಿನಗಳಲ್ಲಿಯೇ ಬೆಂಬಲ ಮತ್ತು ನೆರವನ್ನು ನೀಡಿದ್ದ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ನೆನಪು ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ.

ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಪೂರ್ವವಾದ ಸಾಧನೆ ಮಾಡಿದೆ. ಭಾರತೀಯರೆಲ್ಲರಿಗೂ ಇದು ಹೆಮ್ಮೆಯ ಕ್ಷಣ. ಈ ಅಸಾಧಾರಣ ಸಾಧನೆ ಮಾಡಿದ ಪ್ರತಿಯೊಬ್ಬ ವಿಜ್ಞಾನಿಗಳಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಜಗತ್ತಿನ ಮುಂಚೂಣಿ ದೇಶಗಳ ಸಾಲಿನಲ್ಲಿ ಮತ್ತೊಮ್ಮೆ ನಿಚ್ಚಳವಾಗಿ ಪ್ರಕಾಶಿಸಿದೆ. ಇಸ್ರೋ ಸಂಸ್ಥೆಯ ಮುಂದಿನ ದಿನಗಳ ಎಲ್ಲಾ ಪ್ರಯತ್ನಗಳಿಗೂ ಶುಭ ಹಾರೈಸುತ್ತೇನೆ.

“ಈ ಕ್ಷಣ ಅಭೂತಪೂರ್ವ, ಐತಿಹಾಸಿಕ” ಎಂದ ಪ್ರಧಾನಿ ಮೋದಿ:

ಜೋಹಾನ್ಸ್‌ಬರ್ಗ್: ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ ಕ್ಷಣಗಳನ್ನು ವೀಕ್ಷಿಸಿದರು.

ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯುತ್ತಿದ್ದಂತೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರು “ಭಾರತ ಚಂದ್ರನ ಮೇಲಿದೆ” ಎಂದು ಹೇಳಿದರು.

ಬಳಿಕ ವರ್ಚುವಲ್ ಮೂಲಕ ದೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣ ಅಮೂಲ್ಯವಾಗಿದೆ ಮತ್ತು ಅಭೂತಪೂರ್ವವಾಗಿದೆ. ಈ ಕ್ಷಣ ನವ ಭಾರತದ ಉದಯವಾಗಿದೆ. ಈ ಕ್ಷಣ 1.4 ಬಿಲಿಯನ್ ಹೃದಯ ಬಡಿತಗಳ ಶಕ್ತಿಯಾಗಿದೆ. ಅಮೃತ ಕಾಲದ ಈ ಹಂತದಲ್ಲಿ ಅಮೃತ ವರ್ಷ ಯಶಸ್ವಿಯಾಗಿದೆ” ಎಂದು ಹೇಳಿದರು.

ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಅಭೂತಪೂರ್ವ ಸಾಧನೆಗಾಗಿ ಇಸ್ರೋ, ಅದರ ವಿಜ್ಞಾನಿಗಳನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ನಾನು ದಕ್ಷಿಣ ಆಫ್ರಿಕಾದಲ್ಲಿರಬಹುದು ಆದರೆ ನನ್ನ ಹೃದಯ ಯಾವಾಗಲೂ ಚಂದ್ರಯಾನ ಮಿಷನ್‌ನಲ್ಲಿದೆ”  “ಇದೊಂದು ಐತಿಹಾಸಿಕ ಕ್ಷಣ. ನವ ಭಾರತದ ಹೊಸ ಹಾರಾಟಕ್ಕೆ ನಾವು ಸಾಕ್ಷಿಯಾಗಿದ್ದೇವೆ; ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಸಾಫ್ಟ್ ಲ್ಯಾಂಡಿಂಗ್ ಮಾಡುತ್ತಿದ್ದಂತೆ ಬೆಂಗಳೂರಿನ ಇಸ್ರೋದ ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್‌ನಲ್ಲಿ ಸಂಭ್ರಮಾಚರಣೆ ಮಾಡುವ ಮೂಲಕ ಹೊಸ ಇತಿಹಾಸ ಬರೆಯಲಾಗಿದೆ ಎಂದು ಮೋದಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here