‘ಪಿಎಂ ವಿಶ್ವಕರ್ಮ’ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

0
6

ನವದೆಹಲಿ, ಸೆ. 17 – ‘ವಿಶ್ವಕರ್ಮ ಜಯಂತಿ’ಯಂದು ಪ್ರಧಾನಿ ನರೇಂದ್ರ ಮೋದಿ ಅವರು 13,000 ಕೋಟಿ ರೂ.ಗಳ ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಕನಿಷ್ಠ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ.

ಭಾನುವಾರ ಇಂಡಿಯಾ ಇಂಟರ್ ನ್ಯಾಷನಲ್ ಕನ್ವೆನ್ಶನ್ ಮತ್ತು ಎಕ್ಸ್ ಪೋ ಸೆಂಟರ್ ನಲ್ಲಿ ಪ್ರಧಾನಿ ಮೋದಿ ಅವರು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಿದರು.

ಮುಂದಿನ ಐದುವರ್ಷಗಳ ಅವಧಿಯಲ್ಲಿ ಈ ಯೋಜನೆಗಾಗಿ ಕೇಂದ್ರ ಸರ್ಕಾರ 13,000 ಕೋಟಿ ರೂಪಾಯಿ ವೆಚ್ಚ ಮಾಡಲಿದೆ. ಈ ಯೋಜನೆ ಅಡಿ ನೇಕಾರರು, ಅಕ್ಕಸಾಲಿಗರು, ಕಮ್ಮಾರರು, ಲಾಂಡ್ರಿ ಕಾರ್ಮಿಕರು ಮತ್ತು ಕ್ಷೌರಿಕರು ಸೇರಿದಂತೆ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲತೆಯಲ್ಲಿ ತೊಡಗಿರುವ ಸುಮಾರು 30 ಲಕ್ಷ ಕುಟುಂಬಗಳಿಗೆ ಶೇ. 5 ರಷ್ಟು ರಿಯಾಯಿತಿ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ.

ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಕರ್ಮಿಗಳು ನೀಡುವ ಉತ್ಪನ್ನಗಳು ಹಾಗೂ ಸೇವೆಗಳ ಲಭ್ಯತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವುದು ಯೋಜನೆಯ ಗುರಿಯಾಗಿದೆ.

ಈ ಯೋಜನೆ ಅನ್ವಯ ಕುಶಲಕರ್ಮಿಗಳಿಗೆ ಶೇ. 5 ರಷ್ಟು ಬಡ್ಡಿದರದಲ್ಲಿ 3 ಲಕ್ಷ ರೂ.ವರೆಗೆ ಸಾಲ

ಯಾರಿಗೆ ಲಾಭ?
ಮೊದಲ ಹಂತದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ 18 ಸಾಂಪ್ರದಾಯಿಕ ಉದ್ಯಮಗಳನ್ನು ಯೋಜನೆ ವ್ಯಾಪ್ತಿಗೆ ತರಲಾಗಿದೆ. ಅವುಗಳೆಂದರೆ ಬಡಗಿ, ಬೋಟ್‌ ನಿರ್ಮಾಣ ಮಾಡುವವರು, ಕಮ್ಮಾರ, ಸುತ್ತಿಗೆ ಮತ್ತು ಟೂಲ್‌ ಕಿಟ್‌ ನಿರ್ಮಾಣ ಮಾಡುವವರು, ಶಸ್ತ್ರಾಸ್ತ್ರ ತಯಾರಿಸುವವರು, ಬೀಗ ತಯಾರಿಸುವವರು, ಅಕ್ಕಸಾಲಿಗ, ಕುಂಬಾರರು, ಶಿಲ್ಪ ಕೆತ್ತನೆ ಮಾಡುವವರು, ಚಮ್ಮಾರ, ಮೇಸ್ತ್ರಿ, ಮ್ಯಾಟ್‌/ಹಿಡಿ/ಬಾಸ್ಕೆಟ್‌ ತಯಾರಿಸುವವರು, ಸಾಂಪ್ರದಾಯಿಕ ಗೊಂಬೆ ತಯಾರಿಸುವವರು, ಕ್ಷೌರಿಕರು, ಹೂವಿನ ಹಾರ ತಯಾರಿಸುವವರು, ಧೋಬಿ, ದರ್ಜಿ, ಮೀನುಗಾರಿಕೆ ನೆಟ್‌ ತಯಾರಿಸುವವರು.ನೀಡಲಾಗುವುದು. ಈ ಪೈಕಿ ಮೊದಲ ಹಂತದಲ್ಲಿ 1 ಲಕ್ಷ ರೂ. ಮತ್ತು 2ನೇ ಹಂತದಲ್ಲಿ 2 ಲಕ್ಷ ರೂ. ಸಾಲ ವಿತರಿಸಲಾಗುತ್ತಿದೆ.

LEAVE A REPLY

Please enter your comment!
Please enter your name here