ನಿಫಾ ವೈರಸ್ ನಿಯಂತ್ರಣ – ಕೇರಳ ಪ್ರವಾಸಿಗರಿಗೆ ನಿಷೇಧ ಹೇರಿದ ಚಿಕ್ಕಮಗಳೂರು !

0
13

ಚಿಕ್ಕಮಗಳೂರು,ಸೆ.18-  ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಮಂಡಳಿ ಮತ್ತು ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಸ್ ಹರಡುವುದನ್ನು ತಡೆಯಲು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕೇರಳ ಮಲೆನಾಡು ಪ್ರದೇಶ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವುದರಿಂದ ಜಿಲ್ಲೆಯಲ್ಲಿ ನಿಫಾ ವೈರಸ್ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೇರಳ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಕೇರಳ ರಾಜ್ಯದಿಂದ ಬರುವ ಪ್ರವಾಸಿಗರಿಗೆ ಅವಕಾಶ ನಿರಾಕರಿಸುವಂತೆ ಜಿಲ್ಲೆಯಲ್ಲಿರುವ ಎಲ್ಲಾ ರೆಸಾರ್ಟ್’ಗಳು, ಹೋಂಸ್ಟೇಗಳು ಮತ್ತು ಹೋಟೆಲ್ ಮಾಲೀಕರಿಗೆ ಜಿಲ್ಲಾಡಳಿತ ಮಂಡಳಿ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಬೆಟ್ಟಗಳು ವಿವಿಧ ರಾಜ್ಯಗಳಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದ್ದು, ಪ್ಯಾಕೇಜ್ ಏಜೆನ್ಸಿಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಮತ್ತೊಂದೆಡೆ, ಬಾವಲಿಗಳು ವೈರಸ್‌ನ ವಾಹಕಗಳಾಗಿರುವುದರಿಂದ, ಸ್ಥಳೀಯ ನಿವಾಸಿಗಳು ಮರಗಳಲ್ಲಿ ವಾಸಿಸುವ ಬಾವಲಿಗಳನ್ನು ಸ್ಥಳಾಂತರಿಸುವಂತೆ ಆಡಳಿತ ಮಂಡಳಿಯನ್ನು ಒತ್ತಾಯಿಸುತ್ತಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸುಂದರೇಶ್ ಮಾತನಾಡಿ, ನಾಗರಿಕರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಲು ಸೋಂಕು ತಡೆಗಟ್ಟಲು ಕೈಗೊಳ್ಳಲಾಗಿರುವ ಕ್ರಮಗಳು ಹಾಗೂ ಈ ಕುರಿತು ಶಿಕ್ಷಣವನ್ನು ಜನರಿಗೆ ನೀಡುವುದು ಅಗತ್ಯವಿದೆ ಎಂದು ಹೇಳಿದ್ದಾರೆ.

ಮಲ್ಲೇಗೌಡ ಜಿಲ್ಲಾ ಜನರಲ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮೋಹನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ವರದಿಯಾಗದ ಕಾರಣ ಆತಂಕ ಪಡುವ ಅಗತ್ಯವಿಲ್ಲ, ಮುಂಜಾಗ್ರತಾ ಕ್ರಮವಾಗಿ ವಿಶೇಷ ವಾರ್ಡ್‌ನಲ್ಲಿ ವೆಂಟಿಲೇಟರ್ ಮತ್ತು ಆಮ್ಲಜನಕದ 6 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಬಾವಲಿಗಳು ಅರ್ಧ ಕಚ್ಚಿದ ಹಣ್ಣುಗಳನ್ನು ಜನರು ಸೇವನೆ ಮಾಡಬಾರದು. ಒಂದು ವೇಳೆ ಅನುಮಾನಗಳಿದ್ದರೆ ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ

LEAVE A REPLY

Please enter your comment!
Please enter your name here