ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ: ದೆಹಲಿ ಸಚಿವೆ ಅತಿಶಿ

0
10

ನವದೆಹಲಿ, ಸೆ.19 – ಮಹಿಳಾ ಮೀಸಲಾತಿ ಮಸೂದೆಯು 2024ರ ಲೋಕಸಭೆ ಚುನಾವಣೆಗೆ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆಯಾಗಿದೆ ಎಂದು ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕಿ ಅತಿಶಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡಿಸಿದ್ದು, ಪಕ್ಷಗಳ ನಡುವೆ ಒಮ್ಮತದ ಕೊರತೆಯಿಂದಾಗಿ ಕಳೆದ 27 ವರ್ಷಗಳಿಂದ ಬಾಕಿ ಉಳಿದಿರುವ ಮಸೂದೆಗೆ ಮರು ಜೀವ ನೀಡಲಾಗಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, ಬಿಜೆಪಿಗೆ ಮಹಿಳೆಯರ ಯೋಗಕ್ಷೇಮ ಮತ್ತು ಕಲ್ಯಾಣದಲ್ಲಿ ಆಸಕ್ತಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಮಸೂದೆಯ ನಿಬಂಧನೆಗಳನ್ನು ಸೂಕ್ಷ್ಮವಾಗಿ ಓದಿದರೆ ಅದು ‘ಮಹಿಳಾ ಬೇವಕೂಫ್ ಬನಾವೋ’ ಮಸೂದೆ ಎಂದು ತೋರಿಸುತ್ತದೆ” ಎಂದು ಎಎಪಿ ನಾಯಕಿ ಕಿಡಿ ಕಾರಿದ್ದಾರೆ.

“ಡಿಲಿಮಿಟೇಶನ್ ಮತ್ತು ಜನಗಣತಿಯ ನಿಬಂಧನೆಗಳನ್ನು ಏಕೆ ಸೇರಿಸಲಾಗಿದೆ? ಇದರರ್ಥ 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಹಿಳಾ ಮೀಸಲಾತಿ ಜಾರಿಗೊಳಿಸಲಾಗುವುದಿಲ್ಲ. ನಾವು ಡಿಲಿಮಿಟೇಶನ್ ಮತ್ತು ಜನಗಣತಿಯ ನಿಬಂಧನೆಗಳನ್ನು ತೆಗೆದು ಹಾಕಬೇಕು ಮತ್ತು  2024 ರ ಲೋಕಸಭೆ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ದೆಹಲಿ ಸಚಿವೆ ಅತಿಶಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here