ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್; ಸೀಟು ಹಂಚಿಕೆಯಲ್ಲಿ ಗೊಂದಲ ಇಲ್ಲ – ಎಚ್ ಡಿಕೆ

0
28

ನವದೆಹಲಿ, ಸೆ. 22 – ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ ಮೈತ್ರಿ ಗೊಂದಲಕ್ಕೆ ಶುಕ್ರವಾರ ಕೊನೆಗೂ ತೆರೆ ಎಳೆಯಲಾಗಿದ್ದು, ಜೆಡಿಎಸ್ ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದೆ.

ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, ಅಧಿಕೃತವಾಗಿ ಮೈತ್ರಿ ಬಗ್ಗೆ ಕೆಲ ವಿಚಾರ ಚರ್ಚೆ ನಡೆಸಿದ್ದೇವೆ. ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ ಎಂದಿದ್ದಾರೆ.

ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ, ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಮತ್ತು ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ ಅಥವಾ ಗೊಂದಲ್ಲ ಇಲ್ಲ. ಮುಂದೆ ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಮೈತ್ರಿ ನಡೆಯುತ್ತೆ. ಮೈತ್ರಿ ಸಂಬಂಧ ಚರ್ಚಿಸಲೆಂದೇ ಇಂದು ಬಿಜೆಪಿ ನಾಯಕರ ಭೇಟಿ ಮಾಡಿದ್ದೇವೆ ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

ಇನ್ನು ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, ಎನ್ ಡಿಎ ಅನ್ನು ಮತ್ತಷ್ಟು ಬಲಿಷ್ಠಗೊಳಿಸಲು JDS ಇಂದು NDA ಮೈತ್ರಿಕೂಟಕ್ಕೆ ಅಧಿಕೃವಾಗಿ ಸೇರ್ಪಡೆಗೊಂಡಿದೆ ಮತ್ತು ಇದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ… ಸೀಟು ಹಂಚಿಕೆಯ ಬಗ್ಗೆ ಸಂಸದೀಯ ಮಂಡಳಿ ಮತ್ತು ಜೆಡಿಎಸ್ ನಿರ್ಧರಿಸುತ್ತದೆ”. ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here