ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಕುಂದಾಪುರ ಗ್ಯಾಂಗ್‌ನ 7 ಆರೋಪಿಗಳು ನ್ಯಾಯಾಂಗ ಬಂಧನ

0
15

ಬೆಂಗಳೂರು, ಸೆ. 23 – ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿ ದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಇಂದು ಆರೋಪಿಗಳು ಸಿಸಿಬಿ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಏಳು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅದರಂತೆ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇನ್ನು ಪ್ರಕರಣ ಸಂಬಂಧ ಜಾಮೀನು ಕೋರಿ ರಮೇಶ್, ಚನ್ನನಾಯ್ಕ್‌, ಧನರಾಜ್ ಸಲ್ಲಿಸಿದ್ದು ಅರ್ಜಿ ವಿಚಾರಣೆ ನಡೆಸಿದ 3ನೇ ಎಸಿಎಂಎಂ ಕೋರ್ಟ್‌, ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್‌ಗೆ ಸೂಚನೆ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.

LEAVE A REPLY

Please enter your comment!
Please enter your name here