ಕಾಬೂಲ್,ಅ. 8 – ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದು ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಸೀದಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ ಎಂದು ತಾಲಿಬಾನ್ ಸ್ಪಷ್ಟಪಡಿಸಿದೆ.
ನಮ್ಮ ಆಸ್ಪತ್ರೆಯಲ್ಲಿ 35 ಮೃತದೇಹಗಳು ಮತ್ತು 50ಕ್ಕೂ ಹೆಚ್ಚು ಗಾಯಗೊಂಡ ಜನರನ್ನು ದಾಖಲಿಸಿಕೊಂಡಿದ್ದೇವೆ ಎಂದು ಕುಂಡುಜ್ ಸೆಂಟ್ರಲ್ ಆಸ್ಪತ್ರೆಯ ವೈದ್ಯರೊಬ್ಬರು ಹೇಳಿದ್ದರು.
ಡಾಕ್ಟರ್ಸ್ ವಿಥೌಟ್ ಬಾರ್ಡರ್ಸ್(ಎಂಎಸ್‌ಎಫ್) ನಡೆಸುತ್ತಿರುವ ಇನ್ನೊಂದು ಆಸ್ಪತ್ರೆ ಕನಿಷ್ಠ 15 ಜನರ ಮೃತದೇಹಗಳನ್ನು ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.
ನಮ್ಮ ಶಿಯಾ ದೇಶವಾಸಿಗಳ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದರು.
ದಾಳಿಯ ಹೊಣೆಗಾರಿಕೆಯನ್ನು ಇಲ್ಲಿಯವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ ತಾಲಿಬಾನ್‌ನ ಕಡು ಪ್ರತಿಸ್ಪರ್ಧಿಗಳಾದ ಇಸ್ಲಾಮಿಕ್ ಸ್ಟೇಟ್ ಗುಂಪು ದಾಳಿ ಮಾಡಿರುವ ಸಾಧ್ಯತೆ ಇದೆ.