ಸರ್ಕಾರದ ಚಕ್ರ ಬಡ್ಡಿ ಮನ್ನಾ ಯೋಜನೆ: ಅಧಿಸೂಚನೆ ಹೊರಡಿಸಿದ ಆರ್‌ಬಿಐ

0
234

ಮುಂಬೈ,ಅ.27 – ಲಾಕ್‌ಡೌನ್‌ ಅವಧಿಯಲ್ಲಿ ಸಾಲಗಾರರ ಚಕ್ರ ಬಡ್ಡಿ ಮನ್ನಾ ಮಾಡುವ ಸರ್ಕಾರದ ಯೋಜನೆ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಮಂಗಳವಾರ ಅಧಿಸೂಚನೆ ಹೊರಡಿಸಿದೆ.

Advertisements

ಜೊತೆಗೆ, ಎಲ್ಲಾ ಸಾಲ ನೀಡುವ ಸಂಸ್ಥೆಗಳಿಗೆ ನಿಗದಿತ ಸಮಯದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆರ್ ಬಿಐ ಸೂಚನೆ ನೀಡಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಆರ್‌ಬಿಐ, ಸರ್ಕಾರ ಅಕ್ಟೋಬರ್ 23, 2020 ರಂದು ನಿಗದಿತ ಸಾಲ ಖಾತೆಗಳಲ್ಲಿ (2020 ಮಾ.1 ರಿಂದ ಆ.31) ಸಾಲಗಾರರಿಗೆ ಆರು ತಿಂಗಳ ಕಾಲ ಚಕ್ರ ಬಡ್ಡಿ ಮತ್ತು ಸರಳ ಬಡ್ಡಿ ನಡುವಿನ ವ್ಯತ್ಯಾಸವನ್ನು ಎಕ್ಸ್-ಗ್ರೇಷಿಯಾ ಪಾವತಿ ನೀಡುವ ಯೋಜನೆ ಪ್ರಕಟಿಸಿದೆ.

ಇದರ ಅನುಸಾರ ಮಾರ್ಚ್ 1 ರಿಂದ ಆಗಸ್ಟ್ 31ರವರೆಗಿನ ಅವಧಿಗೆ ಆಯಾ ಸಾಲ ನೀಡುವ ಸಂಸ್ಥೆಗಳಿಂದ ಸರಳ ಬಡ್ಡಿ ಮತ್ತು ಸಂಯುಕ್ತ ಬಡ್ಡಿ ನಡುವಿನ ವ್ಯತ್ಯಾಸವನ್ನು ಜಮಾ ಮಾಡುವ ಮೂಲಕ ಕೆಲವು ವರ್ಗದ ಸಾಲಗಾರರಿಗೆ ಎಕ್ಸ್-ಗ್ರೇಷಿಯಾ ಪಾವತಿ ಕಡ್ಡಾಯಗೊಳಿಸುತ್ತದೆ ” ಎಂದಿದೆ.

ಈ ಯೋಜನೆ ಅನುಸಾರ ಸರ್ಕಾರ ಚಕ್ರ ಬಡ್ಡಿ ಮತ್ತು ಸರಳ ಬಡ್ಡಿಯ ನಡುವಿನ ವ್ಯತ್ಯಾಸವನ್ನು ಪಾವತಿಸಲಿದೆ. ಬಡ್ಡಿಯ ಮೇಲಿನ ಬಡ್ಡಿಯ ಎಕ್ಸ್‌-ಗ್ರೇಷಿಯಾ ಪಾವತಿ ಆರು ತಿಂಗಳ ಕಾಲ ಅನ್ವಯವಾಗಲಿದೆ ಮತ್ತು ಇದು ಆಯ್ದ ನಿರ್ದಿಷ್ಟ ಸಾಲಗಳಿಗೆ ಸೀಮಿತವಾಗಿರಲಿದೆ.

ಕೆಲ ದಿನಗಳ ಹಿಂದೆ ಈ ಯೋಜನೆ ಜಾರಿಗೆ ತರುವ ಕುರಿತು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿತ್ತು.

Advertisements

LEAVE A REPLY

Please enter your comment!
Please enter your name here