ಬಿಜೆಪಿ ಗೆಲುವು ಹಿನ್ನೆಲೆ: ಸಿಎಂ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಸಚಿವರು

0
39

ಬೆಂಗಳೂರು,ನ.10 –  ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತವಾಗಿದೆ. ಈ ನಡುವೆ ಬಿಜೆಪಿಯ ಗೆಲುವಿಗೆ ಸಚಿವರು ಸಿಎಂ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮತ್ತು ಆರ್,ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಗೆಲವು ಖಚಿತವಾಗುತ್ತಿದ್ದಂತೆ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಸಚಿವರಾದ ಆರ್.ಅಶೋಕ, ಬಸವರಾಜ ಬೊಮ್ಮಾಯಿ, ಬಿ ಶ್ರೀರಾಮುಲು, ಭೈರತಿ ಬಸವರಾಜು ಹಾಗೂ ಬಿಜೆಪಿಯ ಇತರೆ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಆರ್.ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 1,25,734 ಮತಗಳನ್ನ ಪಡೆದು ಸುಮಾರು 57 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 74,522 ಮತಗಳನ್ನ ಪಡೆದು ಜಯಶೀಲರಾಗಿದ್ದಾರೆ.

LEAVE A REPLY

Please enter your comment!
Please enter your name here