ಗಡಿ ವಿವಾದ : ಮಹಾರಾಷ್ಟ್ರ ಸಿಎಂ ಹೇಳಿಕೆ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ: ಸಿಎಂ ಬೊಮ್ಮಾಯಿ

0
11

ಬೆಂಗಳೂರು,ನ. 24 –  ಗಡಿ ವಿವಾದಕ್ಕೆ ಸಂಬಂಧಿಸಿದಂತೆ  ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಕುರಿತು ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ ನೀಡಿರುವ ಹೇಳಿಕೆ ಕುರಿತು ಚರ್ಚಿಸಲು  ಮುಂದಿನ ವಾರ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisements

ಮಹಾರಾಷ್ಟ್ರ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ,  ಏಕನಾಥ್ ಸಿಂಧೆ ಹೇಳಿಕೆ ಗಮನಿಸಿದ್ದೇನೆ. ಶಿಂಧೆ ಹೇಳಿಕೆ ಬಗ್ಗೆ ಚರ್ಚಿಸಲು ಮುಂದಿನ ವಾರ ಸರ್ವಪಕ್ಷ ಸಭೆ ಕರೆಯುತ್ತೇನೆ. ಸುಪ್ರೀಂಕೋರ್ಟ್  ನಲ್ಲಿ ವಾದ ಮಾಡುವ ಬಗ್ಗೆ ಈ ಹಿಂದೆ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಧಾರವಾಗಿತ್ತು. ಆದರೆ ಮಹಾರಾಷ್ಟ್ರ ಸಿಎಂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದಕ್ಕೆ  ಹೇಳಿಕೆ ನೀಡಿದ್ದಾರೆ.  ಸದ್ಯ ನಮಗೆ ಸುಪ್ರೀಂಕೋರ್ಟ್ ನಲ್ಲಿ ವಾದ ಮಂಡಿಸುವ ಉದ್ದೇಶವಿದೆ ಎಂದರು.

ಜತ್ ತಾಲ್ಲೂಕು  ಕರ್ನಾಟಕಕ್ಕೆ ಸೇರಿಸುವ ಬಗ್ಗೆ ನಿರ್ಧಾರ ಮಾಡಿವೆ.  ಜತ್ ತಾಲ್ಲೂಕು ವ್ಯಾಪ್ತಿಯ ಗ್ರಾಮಪಂಚಾಯಿತಿಗಳು ನಿರ್ಧರಿಸಿವೆ.  ಇವೆಲ್ಲಾ ಸುಪ್ರೀಂಕೋರ್ಟ್ ವಾದ ಮಂಡನೆ ವೇಳೆ ಪ್ರಸ್ತಾಪವಾಗಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Advertisements

LEAVE A REPLY

Please enter your comment!
Please enter your name here