ಪಕ್ಷ ತೀರ್ಮಾನ ಮಾಡಿದ್ರೆ ಸುನೀಲ್ ಬೋಸ್ ಸ್ಪರ್ಧೆ  ಮಾಡುತ್ತಾರೆ: ಸಚಿವ ಡಾ.ಹೆಚ್.ಸಿ ಮಹದೇವಪ್ಪ

0
12

ಮೈಸೂರು,ನ.24 – ಚಾಮರಾಜ ನಗರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ರ ಸುನೀಲ್ ಬೋಸ್ ಪರ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಬ್ಯಾಟ್ ಬೀಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ನಾನು ಯೋಚನೆ ಮಾಡಿಲ್ಲ.  ಪಕ್ಷ ತೀರ್ಮಾನ ಮಾಡಿದರೆ ಸ್ಪರ್ಧೆ ಮಾಡುತ್ತೇನೆ. ನಾನು ಆಕಾಂಕ್ಷಿ ಏನಾಲ್ಲ ಚಾಮರಾಜ ನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸುನೀಲ್ ಬೋಸ್ ಕೂಡ ಪಕ್ಷ ತೀರ್ಮಾನ ಮಾಡಿದ್ರೆ ಸ್ಪರ್ಧೆ  ಮಾಡುತ್ತಾರೆ. ಪಕ್ಷಕ್ಕೆ ಕೆಲಸ ಮಾಡಿದವರು ಸ್ಪರ್ಧೆ ಮಾಡಬೇಕು. ಸುನೀಲ್ ಬೋಸ್ ನನ್ನ ಮಗ ಅಂತ ಹೇಳುತ್ತಿಲ್ಲ ಕೆಲಸ ಮಾಡಿದ್ದಾರೆ. ಪಕ್ಷ ಆಯ್ಕೆ ಮಾಡಿದರೇ ಸುನೀಲ್ ಬೋಸ್ ಆಕಾಂಕ್ಷಿ ಎಂದರು.

ಚಾಮರಾಜನಗರ, ಮೈಸೂರು- ಕೊಡಗು ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿ ಆಯ್ಕೆ ಆಗಿಲ್ಲ.  ನಾನು ಸುನೀಲ್ ಬೋಸ್ ಪರ ಮಾತನಾಡುತ್ತಿಲ್ಲ.  ಪಕ್ಷದ ಸದಸ್ಯತ್ವ ಪಡೆಯದವರೇ ಶಾಸಕರಾಗಿದ್ದಾರೆ. ರಾಜಕೀಯದಲ್ಲಿ ಅಂಥ ಸನ್ನಿವೇಶಗಳು ಬಂದು ಬಿಡುತ್ತವೆ. ನಂಜನಗೂಡು ಉಪಚುನಾವಣೆಯಲ್ಲೇ ಸುನೀಲ್ ಬೋಸ್ ಅಭ್ಯರ್ಥಿ ಆಗಬೇಕಿತ್ತು.  ಆಗಿನಿಂದಲೇ ಸಂಘಟನೆ ಮಾಡಿದ್ದಾನೆ.‌ ಆದರೆ ಮೂರು ಚುನಾವಣೆಗೆ ಟಿಕೆಟ್ ಸಿಕ್ಕಿಲ್ಲ.  ಅದಾಗ್ಯೂ ಮುನಿಸಿಕೊಳ್ಳದೆ ಪಕ್ಷದ ಪರ ಕೆಲಸ ಮಾಡಿದ್ದಾನೆ. ಅಭ್ಯರ್ಥಿ ಆಯ್ಕೆಗಾಗಿ ವೀಕ್ಷಕರು ಬಂದು ಅಭಿಪ್ರಾಯ ಸಂಗ್ರಹಿಸಿ ಹೋಗಿದ್ದಾರೆ.  ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.

LEAVE A REPLY

Please enter your comment!
Please enter your name here