ಮೈಸೂರು, ನ. 27 – ವಿವಾದಿತ ಗುಂಬಸ್ ಮಾದರಿಯ ಬಸ್ ನಿಲ್ದಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಸಂಸದ ಪ್ರತಾಪ್ ಸಿಂಹ ಮೇಲುಗೈ ಸಾಧಿಸಿದ್ದಾರೆ.
ಇತ್ತೀಚೆಗೆ ಸಾರ್ವಜನಿಕವಾಗಿ ಶಾಸಕ ರಾಮದಾಸ್ ಅವರ ಕಾಲಿಗೆ ಬಿದ್ದು ನಟಿಸಿದ್ದ ಸಂಸದ ಪ್ರತಾಪ ಸಿಂಹ ಈಗ ಅವರ ಕಾಲ ಎಳೆದು ಬೀಳಿಸಿದ್ದಾರೆ ಎಂದು ಕೆಲವರು ಅಣಕಿಸುತ್ತಿದ್ದಾರೆ.
ನಡೆದದ್ದು ಇಷ್ಟೇ:- ಮೈಸೂರು-ಊಟಿ ಹೆದ್ದಾರಿಯ ರಸ್ತೆಯಲ್ಲಿ ಬಸ್ ನಿಲ್ದಾಣದ ಗುಂಬಜ್ ತೆರವು ರಾಜಕಾರಣ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು. ಎರಡು ಚಿಕ್ಕ ಗೋಪುರ ಮಧ್ಯೆ ಒಂದು ದೊಡ್ಡ ಗೋಪುರ ಇದ್ದರೆ ಅದು ಮುಸ್ಲಿಂ ಮಾದರಿ ಕಟ್ಟಡ. ಅದನ್ನ ತೆರವು ಮಾಡೇ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದರು.
ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದೀನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗು ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜಿ ಅವರಿಗೂ ಧನ್ಯವಾದಗಳು. pic.twitter.com/9b1wPLULJ4
— Pratap Simha (@mepratap) November 27, 2022
ಇದೀಗ ಈ ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ನಿರ್ಮಿಸಿದ್ದ ಮೂರು ಗೋಪುರಗಳಲ್ಲಿ ಎರಡನ್ನು ತೆರವು ಮಾಡಲಾಗಿದೆ. ಈ ಕುರಿತು್ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, ಕೊಟ್ಟ ಮಾತಿನಂತೆ ನಾನು ನಡೆದುಕೊಂಡಿದ್ದೇನೆ. ಅದನ್ನ ತೆರವು ಮಾಡುತ್ತೇನೆ ಎಂದಿದ್ದೆ, ಅದರಂತೆ ಈಗ ತೆರವುವಾಗಿದೆ. ಕಾಲಾವಕಾಶ ಕೇಳಿ ಮಾತಿನಂತೆ ಜಿಲ್ಲಾಧಿಕಾರಿ ನಡೆದುಕೊಂಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
Advertisements
ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜೀ ಗೂ ಧನ್ಯವಾದಗಳು ಎಂದು ಫೇಸ್ ಬುಕ್ ಮುಖಪುಟದಲ್ಲಿ ಸಂಸದ ಪ್ರತಾಪ್ ಸಿಂಹ ಬರೆದುಕೊಂಡಿದ್ದಾರೆ.
ಇನ್ನೊಂದು ಕಡೆ ಅನವಶ್ಯಕವಾಗಿ ಧರ್ಮ ಲೇಪನ ಮಾಡಿದ್ದು ನನಗೆ ನೋವಾಗಿದೆ ಎಂದು ಶಾಸಕ ರಾಮದಾಸ್ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೊಂಡಿದ್ದಾರೆ. ಇದು ವಿವಾದಿತ ಬಸ್ ನಿಲ್ದಾಣ ವಿಚಾರದಲ್ಲಿ ಶಾಸಕ ರಾಮದಾಸ್ ಗೆ ಹಿನ್ನಡೆ ತಂದಿದೆ ಎನ್ನಲಾಗಿದೆ.
ಆಡಿದ ಮಾತಿನಂತೆ ನಡೆದುಕೊಂಡಿದ್ದೀನಿ ಎಂದು ಸಂಸದ ಪ್ರತಾಪ್ ಸಿಂಹ ಬೀಗುತ್ತಿರುವುದು ಮುಂದೆ ಸಂಸದ – ಶಾಸಕರ ನಡುವೆ ಶೀತಲ ಸಮರಕ್ಕೆ ನಾಂದಿ ಹಾಡಲಿದೆಯೇ ಎಂಬ ಪ್ರಶ್ನೆಗೆ ಕಾರಣವಾಗಿದೆ.
ಕಾಂಗ್ರೆಸ್ ವ್ಯಂಗ್ಯ: ವಿಪಕ್ಷ ಉಪನಾಯಕ ಯು.ಟಿ.ಖಾದರ್ ನಮ್ಮದು ಊರು ಮತ್ತು ಜನರ ಮನಸ್ಸು ಕಟ್ಟುವ ಕೆಲಸ. ಕೆಲವರದ್ದು ಜನರ ಮನಸ್ಸು ಮತ್ತು ಊರು ಒಡೆಯುವ ಕೆಲಸ. ಅವರು ಒಡೆದುಕೊಂಡು ಹೋಗಲಿ, ನಾವು ಕಟ್ಟಿಕೊಂಡು ಹೋಗ್ತೇವೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು.
ಪಾಲಿಕೆಗೆ ನೋಟಿಸ್: ಇನ್ನು ಬಸ್ ನಿಲ್ದಾಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಧ್ಯ ಪ್ರವೇಶಿಸಿದ್ದು, ಪಾಲಿಕೆ ನೋಟಿಸ್ ನೀಡಿದೆ. ಊಟಿ ಮಾರ್ಗದ ಬಲಭಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಬಸ್ ನಿಲ್ದಾಣವನ್ನು ಒಂದು ವಾರದೊಳಗೆ ತೆರವುಗೊಳಿಸುವಂತೆ ನೋಟಿಸ್ ನೀಡಿದೆ.
Advertisements