ಬೆಳಗಠವಿ: ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿಗೆ ತಳಿತ: ನಾಲ್ಕು ಮಂದಿ ಬಂಧನ

0
21

ಬೆಳಗಾವಿ: ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ  ಬೆಳಗಾವಿ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್​ ಅಂಗಳದಲ್ಲಿದೆ. ಇದರ ಮಧ್ಯೆ ಕನ್ನಡ ಬಾವುಟ (Kannada Flag) ಹಾರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ ನಡೆದಿರುವ ಘಟನೆ ಬೆಳಗಾವಿಯ ಕಾಲೇಜೊಂದರಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುಮೀತ್ ಕಾಂಬ್ಳೆ ಸೇರಿ ನಾಲ್ವರನ್ನು ಅರೆಸ್ಟ್​ ಮಾಡಲಾಗಿದೆ. ಬಂಧಿತರ ಪೈಕಿ ಮೂರು ಜನ ವಿದ್ಯಾರ್ಥಿಗಳು ಅಪ್ರಾಪ್ತರಾಗಿದ್ದು, ಓರ್ವ ಪ್ರಾಪ್ತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಎಸಿಪಿ, ಡಿಸಿಪಿ ನನ್ನ ಮೇಲೆ ಹಲ್ಲೆ ಮಾಡಿದ್ರು: ಸಂತ್ರಸ್ಥನ ಹೇಳಿಕೆ
ಮತ್ತೊಂದೆಡೆ ಘಟನೆ ಬಗ್ಗೆ ಹಲ್ಲೆಗೊಳಗಾದ ವಿದ್ಯಾರ್ಥಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದಾಗ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಪೈಕಿ ಓರ್ವ ನನ್ನ ಕ್ಲಾಸ್‌ಮೇಟ್ ಇದ್ದ. ಬಳಿಕ ನಾನು ಕನ್ನಡ ಸಂಘಟನೆಯ ಮುಖಂಡರ ಜೊತೆಗೆ ಸಂಪರ್ಕ ಮಾಡಿದೆ. ನಾನು ದೂರು ಕೊಡಲು ಸಿದ್ದವಿದ್ಧೆ. ಠಾಣೆಗೆ ಕರೆದುಕೊಂಡು ಹೋಗಿ ಹೆದರಿಸಿ ಡಿಸಿಪಿ ರವೀಂದ್ರ ಗಡಾದಿ ಮತ್ತು ಎಸಿಪಿ ನಾರಾಯಣ್ ಭರಮನಿ ನನ್ನ ಮೇಲೆ ಹಲ್ಲೆ ಮಾಡಿದ್ರು. ಡಿಸಿಪಿ ನನ್ನ ವಿರುದ್ಧ ಅವಾಚ್ಯ ಶಬ್ದ ಬಳಸಿ ಬೈದು ಬೂಟಗಾಲಿಂದ ಒದ್ದರು. ಅಶ್ಲೀಲ ಪದ ಬಳಸಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಎಂದು ಬೆಳಗಾವಿಯಲ್ಲಿ ಹಲ್ಲೆಗೊಳಗಾದ ಅಪ್ರಾಪ್ತ ವಿದ್ಯಾರ್ಥಿ ಹೇಳಿಕೆ ನೀಡಿದ್ದಾನೆ. ಹೀಗಾಗಿ ವಿದ್ಯಾರ್ಥಿ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಎಂಎಲ್‌ಸಿ(ಮೆಡಿಕೋ ಲಿಗಲ್ ಕೇಸ್) ಮಾಡಿದ್ದಾನೆ. ಟೀಳಕವಾಡಿ ಪೊಲೀಸರ ವಿರುದ್ಧ ಜಿಲ್ಲಾಸ್ಪತ್ರೆಯಲ್ಲಿ ಎಂಎಲ್‌ಸಿ ಮಾಡಿಸಿದ್ದಾನೆ.

ಏನಿದು ಘಟನೆ?
ಬೆಳಗಾವಿಯ ಟೀಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್​ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಥಳಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಜೆ 7.30ರ ಸುಮಾರಿಗೆ ಗೋಗಟೆ ಕಾಲೇಜಿನಲ್ಲಿ ಇಂಟರ್ ಕಾಲೇಜು ಫೆಸ್ಟ್ ನಡೆಯುತ್ತಿತ್ತು. ಈ ವೇಳೆ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಮೂರು ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದರು.

ಕನ್ನಡಪರ ಸಂಘಟನೆಗಳ ಆಕ್ರೋಶ
ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಮರಾಠಿ ಪ್ರಿಯರ ವಿರುದ್ಧ ಕನ್ನಡಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ರಸ್ತೆ ತಡೆ ನಡೆಸಿ, ಟಯರ್ ಸುಟ್ಟು ಪ್ರತಿಭಟನೆ ಮಾಡಿದ್ದರು.

LEAVE A REPLY

Please enter your comment!
Please enter your name here