ಬೆಳಗಾವಿ ಅಧಿವೇಶನದಲ್ಲಿ ಕಾಂತರಾಜ್ ವರದಿ ಸೇರಿ ಇನ್ನೆರಡು ವಿಚಾರಗಳ ಬಗ್ಗೆ ಚರ್ಚಿಸಲು ಶಾಸಕರುಗಳಿಗೆ ಎಸ್‌ಡಿಪಿಐ ಮನವಿ

0
14
ಮೈಸೂರು, ಡಿ. 3 :  ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಕಾಂತರಾಜ್ ವರದಿ ಅಂಗೀಕರಿಸುವುದು ಸೇರಿದಂತೆ ಇನ್ನೂ ಪ್ರಮುಖವಾದ ಎರಡು ಬೇಡಿಕೆಗಳನ್ನು ಈಡೇರಿಸುವಂತೆ ಚರ್ಚಿಸಲು  ಮೈಸೂರು ಜಿಲ್ಲೆಯ ಕಾಂಗ್ರೆಸ್‌ ಹಾಗೂ ಜಾ.ದಳದ ಶಾಸಕರುಗಳಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ(ಎಸ್‌ಡಿಪಿಐ) ಮನವಿ ಮಾಡಿದೆ.
ಭಾನುವಾರ ಬೆಳಿಗ್ಗೆ ಪಕ್ಷದ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ವಿಧಾನಪರಿಷತ್  ಸದಸ್ಯ ಡಾ.ಡಿ.ತಿಮ್ಮಯ್ಯ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ ಹಾಗೂ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ  ಅವರನ್ವನು ಭೇಟಿ ಮಾಡಿ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಮೀಸಲು ಪ್ರಮಾಣವನ್ನು ಶೇ.8ಕ್ಕೆ ಏರಿಸುವುದು ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಚರ್ಚಿಸಿ ಅಧಿವೇಶನದಲ್ಲಿ ಈ ವಿಚಾರ ಪ್ರಸ್ಥಾಪಿಸಿ ಮೂರು ವಿಷಯಗಳನ್ನೂ ಜಾರಿಗೊಳಿಸಬೇಕೆಂದು ಕೋರಿದ್ದಾರೆ.

ಇದಲ್ಲದೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ನಾಳೆ ಬೆಂಗಳೂರಿನಿಂದ ಬೆಳಗಾವಿಗೆ ಪಾದಯಾತ್ರೆ ಮೂಲಕ ತೆರಳಿ ಮುಖ್ನಯಮಂತ್ವಿರಿ ಸಿದ್ದರಾಮಯ್ಯ ಅವರಿಗೂ ಮನವಿ ನೀಡುವುದಾಗಿ ತಿಳಿಸಿದರು.

 

ಈ ಸಂದರ್ಭದಲ್ಲಿ ಪಕ್ಷದ ನಗರ ಜಿಲ್ಲಾ ಸಮಿತಿಯ ಉಪಾಧ್ಯಕ್ಷರೂ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು ಆದ ಎಸ್. ಸ್ವಾಮಿ, ಕಾರ್ಯದರ್ಶಿ ಫರ್ದೀನ್ ಅಹಮದ್  ಜಿಲ್ಲಾ ಸಮಿತಿ ಸದಸ್ಯ ಮನ್ಸೂರ್ ಖಾನ್ ಹಾಗೂ ಮನ್ಸೂರ್ ಅಹಮದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here